ಬಂಟ್ವಾಳ: ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ ಮಾ.12ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ತಿಳಿಸಿದರು.
ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ ಡಾ. ವಾರಿಜಾ ನಿರ್ಬೈಲು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಬೆಳಿಗ್ಗೆ 9ಗಂಟೆಗೆ ವಿದ್ಯಾರ್ಥಿಗಳಿಂದ ಗಮಕ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಕರ್ನಾಟಕ ಗಮಕ ಕಲಾ ಪರಿಷತ್ ಅಧ್ಯಕ್ಷೆ ಗಂಗಮ್ಮ ಕೇಶವ ಮೂರ್ತಿ ಅಧ್ಯಕ್ಷತೆ ವಹಿಸುವರು, ಕನ್ನಡ ಸಾಹಿತ್ಯ ಪರಿಷತ್ತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ದೀಪೋಜ್ವಲನಗೊಳಿಸುವರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ, ಬಂಟ್ವಾಳ ತಾಲೂಕು ಪ್ರಥಮ ಗಮಕ ಸಮ್ಮೇಳನದ ಅಧ್ಯಕ್ಷ ಶಂಕರ ಭಟ್ಟ ಮುಳಿಯ ಮತ್ತಿತರರು ಭಾಗವಹಿಸುವರು ಎಂದರು. ಪೂರ್ವಾಹ್ನ 10.45 ರಿಂದ 11 ಗಂಟೆಯವರೆಗೆ ಗಮಕಿ ಮಂಜುಳಾ ಸುಬ್ರಹ್ಮಣ್ಯ ಕುಕ್ಕಾಜೆ ಇವರಿಂದ ಗಮಕ ವಾಚನ ನಡೆಯಲಿದೆ, ನಿವೃತ್ತ ತಹಶೀಲ್ದಾರ್ ಕೆ. ಮೋಹನ್ರಾವ್ ಉಪಸ್ಥಿತರಿರುವರು, 11.00 ರಿಂದ 11.30ರವರೆಗೆ ಗಮಕ ವಿಚಾರಗೋಷ್ಟಿಯಲ್ಲಿ ಗಮಕಿ ಪದ್ಯಾಣ ಗಣಪತಿ ಭಟ್ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಪ್ರಾಧ್ಯಪಕ ಪ್ರೊ. ರಾಜಮಣಿ ರಾಮಕುಂಜ ಗಮಕ ಕಲೆಯ ಬೆಳವಣಿಗೆಯಲ್ಲಿ ಕನ್ನಡ ಶಿಕ್ಷಕರ ಹೊಣೆಗಾರಿಕೆ, ಕಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಗಮಕ ಕಲೆಗೆ ಬಂಟ್ವಾಳ ತಾಲೂಕಿನ ಕೊಡುಗೆ ಎನ್ನುವ ವಿಷಯ ಮಂಡಿಸಲಿರುವರು. ಸೂರ್ಯನಾರಾಯಣ ರಾವ್, ಎಸ್.ಪಿ. ಹೊಳ್ಳ ಉಪಸ್ಥಿತರಿರುವರು ಎಂದರು.
ಪೂರ್ವಾಹ್ನ 11.30ರಿಂದ ಗಮಕ ರಸಪ್ರಶ್ನೆ, ಗಮಕ ರೂಪಕ, ಗಮಕ ರಸವಾಹಿನಿ ನಡೆಯಲಿದೆ. ಮಧ್ಯಾಹ್ನ 2 ರಿಂದ 2.45ರವರೆಗೆ ಪದ್ಯಾಣ ಗಣಪತಿ ಭಟ್ ಅವರಿಂದ ಗಮಕ ವಾಚನ ನಡೆಯಲಿದೆ, 2.30ರಿಂದ 4ರವರೆಗೆ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ಅಧ್ಯಕ್ಷತೆ ವಹಿಸುವರು, ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಸಮರೋಪ ಭಾಷಣ ಮಾಡುವರು, ಡಾ. ವಾರಿಜ ನಿಭೈಲು ಸರ್ವಾಧ್ಯಕ್ಷರ ಭಾಷಣ ಮಾಡುವರು ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ಕಸಪಾ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ, ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಭಾಗವಹಿಸುವರು ಎಂದರು. ಸುದ್ದಿಗೋಷ್ಟಿಯಲ್ಲಿ ಪ್ರಧಾನ ಸಂಚಾಲಕ ಕೃಷ್ಣ ಶರ್ಮ ಅನಾರು, ಸಂಚಾಲಕ ರಾಜಮಣಿ ರಾಮಕುಂಜ, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ಉಪಸ್ಥಿತರಿದ್ದರು.
ಮುಖಪುಟ
ಸುದ್ದಿ
ಬಂಟ್ವಾಳ ಫರಂಗಿಪೇಟೆ
ವಾಮದಪದವು
ವಿಟ್ಲ
ಮಾಣಿ
ಕಲ್ಲಡ್ಕ
ವಿಶೇಷ-ವೈವಿಧ್ಯ
ಸಮಾಜಮುಖಿ
ಯೂಟ್ಯೂಬ್ ಚಾನೆಲ್/ವಿಡಿಯೋ
ಮಾ.12: ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ
Advertisement
Advertisement
Previous Articleಮಾ.10ರಂದು ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಆರಂಭ: ಬಿ.ರಮನಾಥ ರೈ
Related Posts
Add A Comment