ಬಂಟ್ವಾಳ : ಕೂರಿಯಾಳ ಸಮಾಜ ಸೇವಾ ಸಂಘ ಇದರ 5ನೇ ವರ್ಷದ ವಾರ್ಷಿಕೋತ್ಸವವು ಶನಿವಾರ ಕೂರಿಯಾಳ ಮೇಗಿನಕೆರೆ ದೊಂಪದ ಬಲಿ ಕ್ಷೇತ್ರದಲ್ಲಿ ಸಂಜೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ.ರಮಾನಾಥ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಪ್ರಗತಿಪರ ಕೃಷಿಕ ರಘುನಾಥ ಪಯ್ಯಡೆ, ಪ್ರಗತಿಪರ ಕೃಷಿಕ ಪ್ರಸನ್ನ ಭಂಡಾರಿ ಬಳ್ಳಿ, ನಿವೃತ್ತ ಮುಖ್ಯ ಶಿಕ್ಷಕಿ ಸಿಪ್ರಿಯನ್ ಡಿಸೋಜ ಭಾಗವಹಿಸಲಿದ್ದಾರೆ.
Advertisement
ಸಭಾ ಕಾರ್ಯಕ್ರಮದ ಮೊದಲು ಶ್ರೀ ತುಳಸಿ ಕಲಾ ತಂಡದ ಕಲಾವಿದರಿಂದ ಹಾಸ್ಯ ಪ್ರಹಸನ ಮತ್ತು ಸಭಾ ಕಾರ್ಯಕ್ರಮದ ನಂತರ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ರಾಘವ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement