Advertisement
ಬಂಟ್ವಾಳ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡಿದ್ದು ತಾಲೂಕಿನಲ್ಲಿ ಮೊದಲ ದಿನದ ಎಸ್ಎಸ್ಎಲ್ಸಿ ಪರೀಕ್ಷೆ ಶುಕ್ರವಾರ ಯಶಸ್ವಿಯಾಗಿ ನೇರವೇರಿದೆ. ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಶಿಕ್ಷಣ ವ್ಯವಸ್ಥೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿದ್ದು ಯಾವುದೇ ರೀತಿಯ ಅಡತಡೆ, ತೊಂದರೆಗಳಿಲ್ಲದೆ ಪರೀಕ್ಷೆ ಸಾಂಗವಾಗಿ ನಡೆದಿದೆ. 128 ಪುನರಾವರ್ತಿತ ವಿದ್ಯಾರ್ಥಿಗಳೂ ಸೇರಿದಂತೆ ತಾಲೂಕಿನಲ್ಲಿ 5494 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು. ಆದರೆ 5453 ವಿದ್ಯಾರ್ಥಿಗಳು ಹಾಜರಾಗಿ ಮೊದಲ ದಿನದ ಪರೀಕ್ಷೆಗೆ 41 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
—
Advertisement