ಬಂಟ್ವಾಳ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ವಾರ್ಷಿಕ ಮಹಾಸಭೆ ಹಾಗೂ ನೂತನ ಜಿಲ್ಲಾ ಅಧ್ಯಕ್ಷರ ಭೇಟಿ ಕಾರ್ಯಕ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಸುಧಾಕರ್ ಆಚಾರ್ಯ ಉದ್ಘಾಟಿಸಿದರು. ಅವರು ಮಾತನಾಡಿ ನಾವು ಶಕ್ತಿಯುತರಾದಾಗ ಸಂಘಟನೆಯು ಬಲಯುತವಾಗಿರುತ್ತದೆ. ಸಂಘಟನೆಯಲ್ಲಿ ಇರುವ ಜೊತೆಗೆ ಸಮಾಜದ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕಾಗಿದೆ ಎಂದರು. ಮುಖ್ಯ ಅತಿಥಿ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಚೇರ್ಮನ್ ಪುಂಡಲೀಕ ಸುವರ್ಣ ಮಾತನಾಡಿ ಎಲ್ಲಾ ವಲಯದ ಸದಸ್ಯರು ಒಗ್ಗಟ್ಟಾಗಿ ಸಂಘಟಿತರಾಗಿದ್ದಾಗ ಸಂಸ್ಥೆ ಬೆಳೆಯಲು ಸಾಧ್ಯವಿದೆ. ಬಂಟ್ವಾಳ ವಲಯ ಅತ್ಯುತ್ತಮ ಕಾರ್ಯಗಳನ್ನು ನಿರ್ವಹಿಸಿಕೊಂಡು ಬರುತ್ತಿದ್ದು ಮುಂದೆಯೂ ಇದೇ ರೀತಿ ಮುಂದುವರಿಯಲಿ ಎಂದು ಆಶಿಸಿದರು. ಬಂಟ್ವಾಳ ವಲಯದ ಅಧ್ಯಕ್ಷ ಜಗದೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ದಿನೇಶ್ ಕುಮಾರ್, ಬಂಟ್ವಾಳ ವಲಯದ ನಿಕಟಪೂರ್ವಾಧ್ಯಕ್ಷ ಅಣ್ಣು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಬೆಂಕಿ ಅವಘಡಕ್ಕೊಳಕ್ಕಾಗಿ ನಷ್ಟಕ್ಕೀಡಾದ ಕಿರಣ್ ರಾಜ್ ಅವರಿಗೆ ಸಹಾಯಧನ ನೀಡಲಾಯಿತು. ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ಮಿಥುನ್ ಅವರನ್ನು ಗೌರವಿಸಲಾಯಿತು. ಲಕ್ಕಿಗೇಮ್ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ, ಜಿಲ್ಲಾ ಸಂಘದ ಉಪಾಧ್ಯಕ್ಷ ದಿನಕರ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘಟನಾ ಕಾರ್ಯದರ್ಶಿ ಸುಧೀರ್ ಪೂಜಾರಿ ಬೈಪಾಸ್ ಸ್ವಾಗತಿಸಿದರು, ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು, ಕಾರ್ಯದರ್ಶಿ ರಾಜೇಶ್ ಸಾಲ್ಯಾನ್ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಜನಾರ್ದನ ಕುಲಾಲ್ ಲೆಕ್ಕಪತ್ರ ಮಂಡಿಸಿದರು.
ಶಿಕ್ಷಕ ಸಂತೋಷ್ ಕುಮಾರ್ ತುಂಬೆ ಕಾರ್ಯಕ್ರಮ ನಿರೂಪಿಸಿದರು. ಗೌರವ ಸಲಹೆಗಾರ ಪ್ರಶಾಂತ್ ಭಂಡಾರ್ ಕಾರ್ ವಂದಿಸಿದರು.