ಬಂಟ್ವಾಳ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೂ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು,ಹಾಗಾಗಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ಕಾರ್ಯಕರ್ತರು ತಿಳಿಸ ಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಕಲಾಯಿ ಪ್ರವೀಣ್ ನಾಯಕ್ ಅವರ ಮನೆಯಲ್ಲಿ ನಡೆದ ಕಾವಳಮೂಡೂರು ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಮುಂದಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಸುಳ್ಳು ಮಾತಿಗೆ ಮರುಳಾಗದೆ ದೇಶದ ಹಿತ ಕಾಯುವ ಬಿಜೆಪಿಗೆ ಅಧಿಕಾರ ನೀಡಬೇಕು ಎಂದು ತಿಳಿಸಿದರು.
ವಿರೋಧ ಪಕ್ಷದ ಆಡಳಿತ ಅವಧಿಯಲ್ಲಿ ಎರಡು ವರ್ಷಗಳ ಕಾಲ ಶಾಸಕನಾಗಿ ಬಳಿಕ ಕೊರೊನಾ ಸಂದರ್ಭದಲ್ಲಿ ಕಷ್ಟಕರ ಪರಿಸ್ಥಿತಿಯ ಬಳಿಕ ಸಿಕ್ಕಿದ ಎರಡು ವರ್ಷಗಳಲ್ಲಿ ಎಣಿಸದ ರೀತಿಯಲ್ಲಿ ಕ್ಷೇತ್ರದ ಜನತೆಯ ಆಶ್ರೀರ್ವಾದದ ಮೂಲಕ ಅಭಿವೃದ್ಧಿ ಮಾಡಿದ್ದೇನೆ ಎಂದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಇನ್ನಷ್ಟು ಧಾರ್ಮಿಕ ಕ್ಷೇತ್ರಗಳ ಸಹಿತ ಸರ್ವ ರೀತಿಯ ಅಭಿವೃದ್ಧಿಗೆ ಮತ್ತೊಮ್ಮೆ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರಾಗಿ ಆಯ್ಕೆಯಾಗಿ ಬರಬೇಕು, ಈ ನಿಟ್ಟಿನಲ್ಲಿ ಕಾರ್ಯಕರ್ತರು ರಾಜೇಶ್ ನಾಯ್ಕ್ ಕ್ಷೇತ್ರದಲ್ಲಿ ಮಾಡಿದ ಜನಸೇವೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು, ಕಾಂಗ್ರೆಸ್ ಪಕ್ಷದ ಪೊಳ್ಳು ಭರವಸೆಯ ಗ್ಯಾರಂಟಿ ಕಾರ್ಡ್ ಸುಳ್ಳು ಕಾರ್ಡ್ಎಂಬುದನ್ನು ಮತದಾರರಿಗೆ ತಿಳಿಸುವ ಕೆಲಸ ಕಾರ್ಯಕರ್ತರ ಮೂಲಕ ಆಗಬೇಕಾಗಿದೆ.
ಜನರನ್ನು ಅಪಪ್ರಚಾರದ ಮೂಲಕ ದಾರಿ ತಪ್ಪಿಸುವ ಕೆಲಸ ಆಗುತ್ತಿದ್ದು, ಕಾರ್ಯಕರ್ತರು ಎಚ್ಚೆತ್ತುಕೊಂಡು ಮತದಾರರಿಗೆ ಮನವರಿಕೆ ಮಾಡುವ ಕಾರ್ಯ ಆಗಬೇಕು ಎಂದು ತಿಳಿಸಿದರು.
ಗ್ರಾಮಪಂಚಾಯತಿ ಅಧ್ಯಕ್ಷೆ ಜಯಲಕ್ಮೀ ದೇವಾಡಿಗ, ಉಪಾಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ,ನಾವೂರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಕ್ಷೇತ್ರದ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು ಉಪಸ್ಥಿತರಿದ್ದರು.