ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿಯಾಗಿದ್ದು, ಅವರ ಆಶ್ರೀರ್ವಾದದ ಮೂಲಕ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಯಿತು ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಅವರು ದೇವಶ್ಯಪಡೂರು ಶಕ್ತಿ ಕೇಂದ್ರದ ವಿನಯ ಸಪಲ್ಯ ದೋಟ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕ್ಷೇತ್ರದ ಜನತೆಯ ಪ್ರತಿನಿಧಿಯಾಗಿ ಆಯ್ಕೆಮಾಡಿದ ಫಲವಾಗಿ ಶಾಂತಿಯ ಬಂಟ್ವಾಳವಾಗಿ ಸುಧಾರಣೆ ತರಲು ಸಾಧ್ಯವಾಯಿತು. ಬಂಟ್ವಾಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಎಲ್ಲರೂ ಜೊತೆಯಾಗಿ ಸಹಕಾರ ನೀಡಿದ ಋಣವನ್ನು ತೀರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
ಕ್ಷೇತ್ರದಲ್ಲಿ ಮೂರು ಬಾರಿ ಪಾದಾಯಾತ್ರೆ ಮಾಡಿ ಜನರ ಬೇಡಿಕೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.ಕಳೆದ ಹಲವಾರು ವರ್ಷಗಳಿಂದ ಮಾಡಲು ಸಾಧ್ಯವಾಗದ ಅನೇಕ ಅಭಿವೃದ್ಧಿ ಕಾರ್ಯಗಳ ಜೊತೆ ಅನೇಕ ಜನರ ಕ್ಲಿಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ, ಇದರ ಜೊತೆಗೆ ಪಕ್ಷವನ್ನು ಸಂಘಟನಾತ್ಮಕ ವಾಗಿ ಬೆಳೆಸಲು ಅನೇಕ ಕಾರ್ಯಕ್ರಮಗಳನ್ನು ಮಾಡಿ ರಾಜ್ಯದಲ್ಲಿ ಗುರುತಿಸುವಂತೆ ಮಾಡಿದ್ದೇವೆ ಎಂದು ತಿಳಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಎಸ್.ಡಿ.ಪಿ.ಐ.ಹಾಗೂ ಕಾಂಗ್ರೆಸ್ ಎರಡು ಒಂದೇ ನಾಣ್ಯದ ಎರಡು ಮುಖಗಳು ಅವರು ಜೊತೆಯಾಗಿ ನಾವೂರದಲ್ಲಿ ಬಾಂಬ್ ರಿಹರ್ಸಲ್ ಗೆ ಪ್ರೋತ್ಸಾಹ ನೀಡಿದ್ದಾರೆ ಎಂದರು.
ಇಂತಹ ದೇಶದ್ರೋಹದ ಕೆಲಸದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು ಬಿಜೆಪಿ ಪಕ್ಷವನ್ನು ನಿರಂತರವಾಗಿ ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು. ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ರಮನಾಥ ರಾಯಿ, ಜಿಲ್ಲಾ ಯುವ ಮೋರ್ಚಾದಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ನಾವೂರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಹರೀಶ್ ಪ್ರಭು,ಶಕ್ತಿ ಕೇಂದ್ರದ ಪ್ರಮುಖ್ ಸಂಪತ್ ಸನಿಲ್ ಅಲ್ಲಿಪಾದೆ, ಬೂತ್ ಅಧ್ಯಕ್ಷ ಪ್ರವೀಣ್ ಕುಮಾರ್, ನಾವೂರ ಗ್ರಾಮಪಂಚಾಯತ್ ಸದಸ್ಯೆ ಅಪ್ಪಿ, ಗ್ರಾಮಪಂಚಾಯತ್ ಸದಸ್ಯ ನಾರಾಯಣ ಕಿನ್ನಿಯೂರು, ಮಾಜಿ ಗ್ರಾ.ಪಂ.ಉಪಾಧ್ಯಕ್ಷೆ ಸಾವಿತ್ರಿ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.