
ಬಂಟ್ವಾಳ : ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿ ಬಿಸಿರೋಡಿನ ಧನಲಕ್ಮೀ ಕಟ್ಟಡದಲ್ಲಿ ಬುಧವಾರ ಉದ್ಘಾಟನೆಗೊಂಡಿತು.
ಈ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಕಳೆದ ಚುನಾವಣೆಯಲ್ಲಿ ಅಪಪ್ರಚಾರದಿಂದಾಗಿ ಸೋಲನ್ನು ಅನುಭವಿಸಿದ್ದೇನೆ. ಈ ಬಾರಿಯೂ ಅಪಪ್ರಚಾರ ಮುಂದುವರೆಸಲಾಗಿದೆ ಎಂದರು.
ಬಂಟ್ವಾಳ ಕ್ಷೇತ್ರದಲ್ಲಿ ಮಾಡ ಬೇಕಾದ ಅಭಿವೃದ್ಧಿ ಕಾರ್ಯಗಳ, ಕನಸುಗಳು ಅನೇಕ ಇದ್ದು ಅದನ್ನು ಕಾರ್ಯರೂಪಕ್ಕೆ ತರಲು ಜನತೆ ನನಗೆ ಸಹಕಾರ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿಕುಂದರ್, ಸುದೀಪ್ ಕುಮಾರ್ ಶೆಟ್ಟಿ ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್.ಮಹಮ್ಮದ್, ಪದ್ಮಶೇಖರ್ ಜೈನ್, ಸುದರ್ಶನ ಜೈನ್, ಜಿನರಾಜ ಆರಿಗ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಜನಾರ್ದನ ಶೆಟ್ಟಿ ಮೊಡಂಕಾಪು ಗುತ್ತು, ರಾಮಣ್ಣ ಪೂಜಾರಿ ,ಬಿಎಚ್ ಖಾದರ್,ವಲೇರಿಯನ್ ಡಿ.ಸೋಜ, ಬೇಬಿನಾಯ್ಕ್, ಬಾಳಪ್ಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

