ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶನಿವಾರ ತಮ್ಮ ನಾಮಪತ್ರವವನ್ನು ಸಲ್ಲಿಸಿದರು. ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿ ಅಭಿದ್ ಗಡ್ಯಾಲ್ ಅವರಿಗೆ ತನ್ನ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಶೆಟ್ಟಿ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು.
ಪಾದಯಾತ್ರೆಯಲ್ಲಿ ಆಗಮಿಸಿದ ರಾಜೇಶ್ ನಾಯ್ಕ್:
ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಪಾದಯಾತ್ರೆಯ ಮೂಲಕ ಬಿ.ಸಿ.ರೋಡಿನತ್ತ ಹೆಜ್ಜೆ ಹಾಕಿದರು. ಈ ಸಂದರ್ಭ ಅಪಾರ ಸಂಖ್ಯೆಯ ಬೆಂಬಲಿಗರು ಜಯಘೋಷ ಹಾಕುತ್ತ ಅವರ ಜೊತೆ ಹೆಜ್ಜೆ ಹಾಕಿದರು. ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಆಗಮಿಸಿ ತಮ್ಮ ಮೆಚ್ಚಿನ ನಾಯಕನಿಗೆ ಬೆಂಬಲ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಶ್ ನಾಯ್ಜ್ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿಯ ಚುನಾವಣೆಯಯ್ಲಲಿ ಅತ್ಯಧಿಕ ಮತಗಳಿಂದ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕ್ರಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ನನ್ನ ಪ್ರಬಲ ಪ್ರತಿಸ್ಪರ್ಧಿಯಾಗಿದ್ದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆ, ಜನಪರ ಯೋಜನೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾರ್ಯ ತನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ ಎಂದು ತಿಳಿಸಿದರು
ಸಚಿವ ಕೋಟ ಶ್ರೀನಿವಾಸ ಪೂಜರಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರುಗಳಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ಸಂತೋಷ್ ಶೆಟ್ಟಿ ದಳಂದಿಲ, ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಒಳಚರಂಡಿ ಮತ್ತು ನಗರ ನೀರು ಸರಬರಾಜು ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ದೇವಪ್ಪ ಪೂಜಾರಿ ಕಸ್ತೂರಿ ಪಂಜ, ಸುಚರಿತ ಶೆಟ್ಟಿ, ಕೊರಗಪ್ಪ ನಾಯ್ಕ್, ಶರಣ್ ಪಂಪ್ ವೆಲ್ , ರಾಮ್ ದಾಸ್ ಬಂಟ್ವಾಳ ,ಡೊಂಬಯ್ಯ ಅರಳ,ರವೀಶ್ ಶೆಟ್ಟಿ ಕರ್ಕಳ, ಗೋವಿಂದ ಪ್ರಭು, ದಿನೇಶ್ ಭಂಡಾರಿ, ಉದಯರಾವ್, ಸುದರ್ಶನ ಬಜ, ಪ್ರಭಾಕರ ಪ್ರಭು, ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ, ನಳಿನಿ ಶೆಟ್ಟಿ, ಮಾಧವ ಮಾವೆ, ಪುಷ್ಪರಾಜ್ ಚೌಟ, ಕಿಶೋರ್ ಪಲ್ಲಿಪಾಡಿ, ಶ್ರೀಧರ್ ಶೆಟ್ಟಿ ಪುಳಿಂಚ, ಕಮಲಾಕ್ಷಿ ಕೆ.ಪೂಜಾರಿ, ರವೀಂದ್ರ ಕಂಬಳಿ, ವಿಲಾಸ್ ನಾಯಕ್, ಪ್ರಕಾಶ್ ಅಂಚನ್, ಚನ್ನಪ್ಪ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ, ರಮನಾಥ ರಾಯಿ, ದಿನೇಶ್ ಅಮ್ಟೂರು, ಮೋನಪ್ಪ ದೇವಶ್ಯ, ವಜ್ರನಾಥ ಕಲ್ಲಡ್ಕ, ಪ್ರದೀಪ್ ಅಜ್ಜಿಬೆಟ್ಡು, ದಿನೇಶ್ ದಂಬೆದಾರ್, ಸತೀಶ್ ಪೂಜಾರಿ ಆಳಕೆ, ಯಶೋಧರ ಕರ್ಬೆಟ್ಟು, ಸಂದೇಶ್ ಶೆಟ್ಟಿ, ಸಂದೀಪ್ ಶೆಟ್ಟಿ, ಸುಪ್ರೀತ್ ಆಳ್ಚ, ಗಣೇಶ್ ರೈ ಮಾಣಿ, ಸುರೇಶ್ ಕೋಟ್ಯಾನ್, ಭಾರತಿ ಚೌಟ, ಸೀಮಾಮಾಧವ, ಹರ್ಷಿಣಿ ಪುಷ್ಪಾನಂದ, ಶರ್ಮಿತ್ ಜೈನ್ ವೆಂಕಟೇಶ್ ನಾವುಡ, ಯಶವಂತ ಪೊಳಲಿ ಮತ್ತಿತರರು ಉಪಸ್ಥಿತರಿದ್ದರು.