ಬಂಟ್ವಾಳ: ನೇತ್ರಾವತಿ ನದಿಗೆ ಆಕಸ್ಮಿಕವಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಮಾರು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ರಾಮಕ್ಕು ಎಂದು ಗುರುತಿಸಲಾಗಿದೆ. ಬಟ್ಟೆ ತೊಳೆಯಲು ಹೋದ ಸಂದರ್ಭ ಈ ದುರ್ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Advertisement
Advertisement
Advertisement
Advertisement