ಬಂಟ್ವಾಳ: ವಿಧಾನಸಭೆಯ ಬಂಟ್ವಾಳ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಏ.20ರ ಗುರುವಾರ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.
Advertisement
Advertisement
Advertisement
ಇದುವರೆಗೆ ಬಿಜೆಪಿಯ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಎಸ್.ಡಿ.ಪಿ.ಐ.ನಿಂದ ಇಲ್ಯಾಸ್ ತುಂಬೆ, ಮಜೀದ್ ಅವರು ನಾಮಪತ್ರ ಸಲ್ಲಿಸಿದ್ದರು. ಇದೀಗ ಗುರುವಾರ ಒಂದೇ ದಿನ 5 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್ ನಿಂದ ಬಿ.ರಮಾನಾಥ ರೈ,
ಜಾತ್ಯತೀತ ಜನತಾದಳದಿಂದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಾರ್ಟಿಯಿಂದ ಪುರುಷೋತ್ತಮ, ಉತ್ತಮ ಪ್ರಜಾಕೀಯ ಪಕ್ಷದಿಂದ ಅನೀಶ್ ಶೆಟ್ಟಿ, ಪಕ್ಷೇತರ ಅಭ್ಯರ್ಥಿಯಾಗಿ ಬಿ.ಟಿ.ಕುಮಾರ್ ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಚುನಾವಣಾದಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Advertisement