ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ.
2022-23ನೆ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9ರಿಂದ 29ರವರೆಗೆ ನಡೆಸಲಾಗಿತ್ತು. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನವೂ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ಫಲಿತಾಂಶವನ್ನು ಈ ಲಿಂಕ್ ನಲ್ಲಿ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ತಿಳಿಸಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸುವುದು ಹೇಗೆ?
ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ http://www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ.
ಓಪನ್ ಆದ ಪೇಜ್ನಲ್ಲಿ 2nd ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
ಆ ಓಪನ್ ಆದ ಪೇಜ್ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ.
ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.
ಅದನ್ನು ಡೌನ್ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.