ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಲ್ಲಿಕೆಯಾಗಿದ್ದ 8 ನಾಮಪತ್ರಗಳ ಪೈಕಿ 2 ನಾಮಪತ್ರ ತಿರಸ್ಕೃತ ಗೊಂಡಿದೆ.
ಚುನಾವಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಾಮಪತ್ರ ಪರಿಶೀಲನೆ ನಡೆದಿದ್ದು ಈ ಸಂದರ್ಭ ಉತ್ತಮ ಪ್ರಜಾಕೀಯ ಪಕ್ಷದ ಅನೀಶ್ ಶೆಟ್ಟಿಯವರು 10 ಸೂಚಕರ ಬದಲಾಗಿ ಕೇವಲ 7 ಸೂಚಕರನ್ನು ಮಾತ್ರ ನೀಡಿದ್ದಾರೆ, ಪಕ್ಷೇತರ ಅಭ್ಯರ್ಥಿ ಬಿ.ಟಿ.ಕುಮಾರ್ ರವರು ನಾಮಪತ್ರ ಪೂರ್ಣವಾಗಿ ತುಂಬಿಸಿಲ್ಲ, ಠೇವಣಿ ಪಾವತಿಸಿಲ್ಲ, ಸೂಚಕರನ್ನು ನೀಡಿಲ್ಲ, ನಮೂನೆ 26 ತುಂಬಿಲ್ಲದ ಕಾರಣ ಈ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ. ಉಳಿದಂತೆ
Advertisement
ಭಾರತೀಯ ಜನತಾ ಪಾರ್ಟಿಯ ರಾಜೇಶ್ ನಾಯ್ಕ್ ಯು, ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಎಂ.ಇಲಿಯಾಸ್, ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದ (ಪಕ್ಷೇತರ ಅಭ್ಯರ್ಥಿ) ಅಬ್ದುಲ್ ಮಜೀದ್ ಖಾನ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಮಾನಾಥ ರೈ, ಜಾತ್ಯಾತೀತ ಜನತಾ ದಳದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಕ್ಷದ ಪುರುಷೋತ್ತಮ ರವರ ನಾಮಪತ್ರ ಅಂಗೀಕೃತವಾಗಿದೆ.
Advertisement