Advertisement
ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಲಾಯಿಲದ ವೆಂಕಟರಮಣ ದೇವಸ್ಥಾನಕ್ಕೆ ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಭೇಟಿ ನೀಡಿ ಕಾಶಿಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ಸದಸ್ಯ ಎ.ಗೋವಿಂದ ಪ್ರಭು , ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಿಜೆಪಿ ಪ್ರಮುಖರಾದ ಉದಯಕುಮಾರ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
Advertisement