ಬಂಟ್ವಾಳ: ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ.ಕ. ಜಿಲ್ಲೆಯ ಬಂಟ್ವಾಳದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಬೃಹತ್ ರೋಡ್ ಶೋ ನಡೆಸಲಿದ್ದು,ಈ ಸಂದರ್ಭ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ
Advertisement
ಯೋಗಿ ಆದಿತ್ಯನಾಥ್ ಅವರು ಆಗಮಿಸುವ ಹೆಲಿಪ್ಯಾಡ್ ಸ್ಥಳ ಬದಲಾವಣೆಯಾಗಿದ್ದು, ಅವರು ಬಂಟ್ವಾಳ ತಾಲೂಕು ಶಾಂತ ಜಿ ಮೇಲಾಂಟ ಇವರ ಬಸ್ತಿಪಡು ಮೈದಾನದಲ್ಲಿರುವ ಹೆಲಿಪ್ಯಾಡ್ ನಲ್ಲಿ ಇಳಿಯಲಿರುವುದರಿಂದ ಮತ್ತು ಕಾರ್ಯಕ್ರಮಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದು, ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಲಾಗಿದೆ.
Advertisement