Advertisement
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ಎಸ್ಎಸ್ಎಲ್ಸಿ ಫಲಿತಾಂಶವು (ಮೇ 08) ಬೆಳಿಗ್ಗೆ10 ಗಂಟೆಗೆ ಪ್ರಕಟವಾಗಲಿದೆ. ರಿಸ್ಟಲ್ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.
ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEEB) ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2023 (Karnataka SSLC Result 2023) ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದ್ದು, (May 08) ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಅಧಿಕೃತ ವೆಬ್ಸೈಟ್ ಅಲ್ಲಿ ಫಲಿತಾಂಶ ಪ್ರಕಟವಾಗಲಿದೆ. sslc.karnataka.gov.in ಮತ್ತು kseab.karnataka.gov.in. ಫಲಿತಾಂಶವನ್ನು ಪರಿಶೀಲಿಸಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
ಕರ್ನಾಟಕ SSLC ಫಲಿತಾಂಶ 2023: ಪರಿಶೀಲಿಸುವುದು ಹೇಗೆ?
- ಅಧಿಕೃತ ವೆಬ್ಸೈಟ್-sslc.karnataka.gov.in ಗೆ ಹೋಗಿ
- ಕಾಣಿಸಿಕೊಂಡ ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ
- ಹೊಸ ಲಾಗಿನ್ ಪುಟ ತೆರೆಯುತ್ತದೆ
- ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ
- ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್ಲೋಡ್ ಮಾಡಿ
Advertisement