ಬಂಟ್ವಾಳ: ವಿಧಾನಸಭಾ ಚುನಾವಣೆಯ ಮತದಾನ ಆರಂಭಗೊಂಡಿದ್ದು ಬಂಟ್ಚಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ಆರಂಭಗೊಂಡಿದೆ. ಬೆಳಗ್ಗಿನಿಂದಲೇ ಜನರು ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು.
ಮಾಜಿ ಶಾಸಕ ರಾಜೇಶ್ ನಾಯ್ಕ್ ಎಡಪದವಿನ ಮತಗಟ್ಟೆಯಲ್ಲಿ ಮತಚಲಾಯಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ತೊಡಂಬಿಲ ಸೆಕ್ರೆಡ್ ಹಾರ್ಟ್ ಅನುದಾನಿತ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸದರು. ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಎಸ್ ವಿ ಎಸ್ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದೇ ಮತಗಟ್ಟೆಯಲ್ಲಿ ಕಿಯೋನಿಕ್ಸ್ ನಿಕಟಪೂರ್ವ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ ಮತಚಲಾಯಿಸಿದರು.
Advertisement