
ಬಂಟ್ವಾಳ: ಇಲ್ಲಿನ ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ನಿರ್ಮಾಣಗೊಂಡ ಸಂಸ್ಥೆಯ ಸುವರ್ಣಮಹೋತ್ಸವದ ಯೋಜನೆಯಾದ ಲಯನ್ಸ್ ಸಭಾಭವನದ ಉದ್ಘಾಟನಾ ಸಮಾರಂಭ ಮೇ.15ರಂದು ಸೋಮವಾರ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ತಿಳಿಸಿದರು.
ಅವರು ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಲಯನ್ಸ್ನ ಅಂತರಾಷ್ಟ್ರೀಯ ನಿರ್ದೇಶಕ ಕೆ. ವಂಶೀಧರ್ ಬಾಬು ನೂತನ ಸಭಾಭವನ ಉದ್ಘಾಟಿಸುವರು, ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಪೂರ್ವ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ, ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ವಸಂತ ಕುಮಾರ್ ಶೆಟ್ಟಿ, ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಭಾಗವಹಿಸುವರು. ಅಭ್ಯಾಗತರಾಗಿ ಚುನಾಯಿತ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಚುನಾಯಿತ ಪ್ರಥಮ ಉಪಗವರ್ನರ್ ಬಿ.ಎಂ. ಭಾರತಿ, ಚುನಾಯಿತ ದ್ವಿತೀಯ ಉಪಗವರ್ನರ್ ಅರವಿಂದ ಶೆಣೈ, ಲಯನ್ಸ್ ಕ್ಲಬ್ ಬಂಟ್ವಾಳದ ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗ ಭಾಗವಹಿಸುವರು ಎಂದು ತಿಳಿಸಿದರು.

ಸುಮಾರು 4 ಸಾವಿರ ಚ. ಅಡಿ ವಿಸ್ತೀರ್ಣದ ಸಭಾಂಗಣದ ಇದಾಗಿದ್ದು ಅಂದಾಜು 35 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಭಾಭವನದ ಬಾಡಿಗೆಯ ರೂಪದಲ್ಲಿ ಬರುವ ಮೊತ್ತ ಲಯನ್ಸ್ ಸೇವಾ ಟ್ರಸ್ಟ್ ಮೂಲಕ ನಡೆಯುತ್ತಿರುವ ವಿಶೇಷ ಚೇತನ ಮಕ್ಕಳ ಪಾಲನ ಕೇಂದ್ರಕ್ಕೆ ವಿನಿಯೋಗವಾಗಲಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್, ಕಾರ್ಯದರ್ಶಿ ಶಿವಾನಂದ ಬಾಳಿಗ, ಸುವರ್ಣ ಮಹೋತ್ಸವ ಸಮಿತಿ ಕೋಶಾಧಿಕಾರಿ ಜಯಂತ್ ಶೆಟ್ಟಿ, ಲಯನ್ಸ್ ಸೇವಾ ಟ್ರಸ್ಟ್ ಕೋಶಾಧಿಕಾರಿ ಸುನೀಲ್ ಬಿ., ಪ್ರಾಂತೀಯ ಅಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲು ಉಪಸ್ಥಿತರಿದ್ದರು.

—
