ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ನಿರ್ಮಾಣಗೊಂಡ ಸಂಸ್ಥೆಯ ಸುವರ್ಣಮಹೋತ್ಸವದ ಯೋಜನೆಯಾದ ಲಯನ್ಸ್ ಸಭಾಭವನದ ಉದ್ಘಾಟನಾ ಸಮಾರಂಭ ಬಿ.ಸಿ.ರೋಡಿನಲ್ಲಿ ವಿಜ್ರಂಭಣೆಯಿಂದ ನಡೆಯಿತು.
ಲಯನ್ಸ್ನ ಅಂತರಾಷ್ಟ್ರೀಯ ನಿರ್ದೇಶಕ ಕೆ. ವಂಶೀಧರ್ ಬಾಬು ನೂತನ ಸಭಾಭವನವನ್ನು ಉದ್ಘಾಟಿಸಿದರು. ಅವರು ಮಾತನಾಡಿ ನೂತನ ಭವನದಿಂದ ಬಾಡಿಗೆ ರೂಪದಲ್ಲಿ ಬರುವ ಹಣವನ್ನು ಸಂಸ್ಥೆಯ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ವಿಶೇಷ ಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರದ ಚಟುವಟಿಕೆಗಳಿಗೆ ಬಳಸುವ ಕ್ಲಬ್ನ ಬದ್ದತೆಯನ್ನು ಅಭಿನಂದಿಸುವುದಾಗಿ ತಿಳಿಸಿದರು. ಬಂಟ್ವಾಳ ಕ್ಲಬ್ ತನ್ನ ಸೇವಾ ಚಟುವಟಿಕೆಗಳ ಮೂಲಕ ಮಾಧರಿ ಕ್ಲಬ್ ಆಗಿ ಗುರುತಿಸಿದೆ ಎಂದು ಶ್ಲಾಘಿಸಿದ ಅವರು ಸ್ಫಾಪಕ ಸದಸ್ಯರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಪೂರ್ವ ಅಂತರಾಷ್ಟ್ರೀಯ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ ಹಾಗೂ ಜಿಲ್ಲಾ ಗವರ್ನರ್ ಎಸ್. ಸಂಜಿತ್ ಶೆಟ್ಟಿ ಶುಭ ಕೋರಿದರು. ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಸ್ಥೆಯ ಸ್ಥಾಪಾಕಾಧ್ಯಕ್ಷ ಡಾ, ವಸಂತ ಬಾಳಿಗ, ಸತೀಶ್ ಕುಡ್ವ ಹಾಗೂ ಶ್ಯಾಂ ಭಟ್ ಅವರನ್ನು ಗೌರವಿಸಲಾಯಿತು. ನೂತನ ಸಭಾಭವನಕ್ಕೆ ವಿಶೇಷ ಆರ್ಥಿಕ ಸಹಕಾರ ನೀಡಿದ ಕ್ಲಬ್ಬಿನ ಸದಸ್ಯರನ್ನು ಗೌರವಿಸಲಾಯಿತು. ಸ್ಮರಣ ಸಂಚಿಕೆ ಸ್ವರ್ಣ ಪಥವನ್ನು ಲಯನ್ಸ್ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಬಿಡುಗಡೆಗೊಳಿಸಿದರು. ಸಂಸ್ಥೆ ನಡೆದು ಬಂದ ಇತಿಹಾದವನ್ನು ಮೆಲುಕು ಹಾಕುವ ಸಾಕ್ಷ ಚಿತ್ರ ಪ್ರದರ್ಶಿಸಲಾಯಿತು.
ಚುನಾಯಿತ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಚುನಾಯಿತ ದ್ವಿತೀಯ ಉಪಗವರ್ನರ್ ಅರವಿಂದ ಶೆಣೈ, ಲಯನ್ಸ್ ಕ್ಲಬ್ ಬಂಟ್ವಾಳದ ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗ, ಪ್ರಾಂತೀಯ ಅಧ್ಯಕ್ಷ ಲಕ್ಷ್ಮಣ್ ಕುಲಾಲ್, ಕ್ಲಬ್ ಕಾರ್ಯದರ್ಶಿ ಬಿ. ಶಿವಾನಂದ ಬಾಳಿಗ, ಕೋಶಾಧಿಕಾರಿ ಜಗದೀಶ್ ಬಿ.ಎಸ್., ಸುವರ್ಣ ಸಂಭ್ರಮ ಸಮಿತಿ ಕಾರ್ಯದರ್ಶಿಮದ್ವರಾಜ್ ಬಿ. ಕಲ್ಮಾಡಿ, ಜಯಂತ್ ಶೆಟ್ಟಿ, ಲಯನ್ಸ್ ಸೇವಾ ಟ್ರಸ್ಟ್ ಕೋಶಾಧಿಕಾರಿ ಸುನೀಲ್ ಬಿ. , ಲಿಯೋ ಅಧ್ಯಕ್ಷೆ ಭುವಿ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು. ಸುವರ್ಣ ಸಂಭ್ರಮ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು. ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ವಸಂತ ಕುಮಾರ್ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ನಿಕಟಪೂರ್ವ ಕಾರ್ಯದರ್ಶಿ ರಾಧಕೃಷ್ಣ ಬಂಟ್ವಾಳ್ ಕಾರ್ಯಕ್ರಮ ನಿರೂಪಿಸಿದರು.