ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜನ ಶಿಕ್ಷಣ ಟ್ರಸ್ಟ್ನ ಸಹಭಾಗಿತ್ವದಲ್ಲಿ, ಬಂಟ್ವಾಳ ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸಾಂತ್ವನ ಕೇಂದ್ರದಲ್ಲಿ ತೆರವಾಗಿರುವ ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಮಾಜ ಕಾರ್ಯ ಅಥವಾ ಮನಶಾಸ್ತ್ರದಲ್ಲಿ ಪದವಿ ವಿದ್ಯಾರ್ಹತೆ ಹೊಂದಿದ್ದು 22 ರಿಂದ 25 ವರ್ಷದೊಳಗಿನ ಕಂಪ್ಯೂಟರ್ ಜ್ಞಾನ ಹೊಂದಿರುವ ಗೌರವಧನದ ಆಧಾರದಲ್ಲಿ ಕೆಲಸ ಮಾಡಲು ಇಚ್ಚಿಸುವ ಸೇವಾಸಕ್ತ ಮತ್ತು ಕ್ಷೇತ್ರ ಅನುಭವ ಹೊಂದಿರುವ ಬಂಟ್ವಾಳ ತಾಲೂಕು ವ್ಯಾಪ್ತಿಯೊಳಗಿನ ಮಹಿಳಾ ಅಭ್ಯರ್ಥಿಗಳು 25.05.2023 ರೊಳಗೆ ನಿರ್ದಿಷ್ಟ ಅರ್ಜಿ ನಮೂನೆಯನ್ನು ಸಾಂತ್ವನ ಕೇಂದ್ರದಿಂದ ಪಡೆದು ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ನಿರ್ದೇಶಕರು, ಜನ ಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ಸ್ತ್ರೀ ಶಕ್ತಿ ಭವನ, ತಾಲೂಕು ಪಂಚಾಯತ್ ರಸ್ತೆ, ಬಿ.ಸಿ. ರೋಡ್, Email: santhwanabantwal089@gmail.com ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ : 8255- 233089, 9449642137ನ್ನು ಸಂಪರ್ಕಿಸಬಹುದು.