ಬಂಟ್ವಾಳ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಚ ಭಾರತ್ ಮಿಷನ್-2.೦ ಯೋಜನೆಯಡಿ ಸ್ಥಳೀಯ ಮಟ್ಟದಲ್ಲಿ ಪರಿಣಾಮ ಬೀರುವ ಅಭಿಯಾನವನ್ನು ಪ್ರಾರಂಭಿಸಿದ್ದು, ನವೀಕರಿಸಿ ಮರು ಬಳಸ ಬಹುದಾದಂತಹ ವಸ್ತುಗಳ ಉತ್ಪಾದನೆಯನ್ನು ಕಡಿಮೆ ಗೊಳಿಸಲು ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಸರವನ್ನು ರಕ್ಷಿಸುವ ಪ್ರಮುಖ ಉದ್ದೇಶದಿಂದ ನನ್ನ ಜೀವನ ನನ್ನ ಸ್ವಚ್ಛ ನಗರ ಯೋಜನೆಯ ಕಾರ್ಯಕ್ರಮದಡಿ ಕಡಿಮೆಗೊಳಿಸುವುದು, ಮರುಬಳಕೆ ಮತ್ತು ಪುನರ್ಬಳಕೆ ಕೇಂದ್ರಗಳನ್ನು ಬಂಟ್ವಾಳ ಪುರಸಭಾ ವ್ಯಾಪ್ತಿಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರ ಅಥವಾ ಗುರುತಿಸಿರುವ ನಗರದ ಪ್ರಮುಖ ಸ್ಥಳಗಳಲ್ಲಿ ವಸ್ತು ಮರು ಪಡೆಯುವ ಸೌಲಭ್ಯಕೇಂದ್ರಗಳನ್ನುನ ಆರಂಭಿಸಿದೆ.
ಕಡಿಮೆಗೊಳಿಸುವುದು, ಮರುಬಳಕೆ ಮತ್ತು ಪುನರ್ಬಳಕೆ ಕೇಂದ್ರಗಳಾಗಿ ಬಳಸಿ, ನನ್ನಜೀವನ ನನ್ನ ಸ್ವಚ್ಚನಗರ ಯೋಜನೆಯನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲು ಬಂಟ್ವಾಳ ಪುರಸಭೆಯು ತೀರ್ಮಾನಿಸಿದ್ದು ದಿನಾಂಕ 20.5.2023 ರಿಂದ 05.06.2023 ರವರೆಗೆ ಬಡ್ಡಕಟ್ಟೆ ವೈಕುಂಠ ಬಾಳಿಗ ವಾಣಿಜ್ಯಸಂಕೀರ್ಣ, ಬಿ.ಸಿ.ರೋಡ್ ಬಸ್ ನಿಲ್ದಾಣ ಬಳಿ, ಪಾಣೆಮಂಗಳೂರು ಮಾರುಕಟ್ಟೆ ಬಳಿ
ಈ ಕೆಳಕಂಡ ಸ್ಥಳಗಳಲ್ಲಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರು ಮೇಲ್ಕಂಡ ಕೇಂದ್ರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್, ಕ್ಯಾರಿ ಬ್ಯಾಗ್, ಸೇರಿದಂತೆ ಆಟಿಕೆವಸ್ತುಗಳನ್ನು, ಬಳಸಿದಬಟ್ಟೆ, ದಿನಪತ್ರಿಕೆಗಳು, ಹಳೆಯ ಪುಸ್ತಕಗಳು ಹಾಗು ಎಲೆಕ್ಟ್ರಾನಿಕ್ ವಸ್ತುಗಳಂತಹ 6 ಬಗೆಯ ನವೀಕರಿಸಿ ಮರು ಬಳಸ ಬಹುದಾದಂತಹ ವಸ್ತುಗಳನ್ನು ಮೇಲ್ಕಾಣಿಸಿದ ಮರುಪಡೆಯುವ ಸೌಲಭ್ಯ ಕೇಂದ್ರ ಗಳಿಗೆ ನೀಡಿ ಸದರಿ ಕಾರ್ಯಕ್ರಮದ ಉಪಯೋಗ ಪಡೆದು ಕೊಂಡು ಹಾಗೂ ಸುಸ್ಥಿರ ಜೀವನ ಪದ್ದತಿಗಳನ್ನು ಅಳವಡಿಸಿಕೊಳ್ಳವ ಮೂಲಕ ಪರಿಸರವನ್ನು ರಕ್ಷಿಸುವ ಪ್ರಮುಖ ಉದ್ದೇಶವನ್ನು ಮನಗಂಡು ಪುರಸಭೆಯೊಂದಿಗೆ ಸಹಕರಿಸಲು ಕೋರಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾರ್ವಜನಿಕರಿಗೆ ಡಿಜಿಟಲ್ ಪ್ರಮಾಣಪತ್ರ ಹಾಗೂ ಪ್ರೋತ್ಸಾಹಕವನ್ನು ನೀಡಿ ಗೌರವಿಸಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.