ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನಲ್ಲಿ ನೂತನವಾಗಿ ಅಸ್ತಿತ್ವಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ವತಿಯಿಂದ ನೂತನ ‘ಪದಾಧಿಕಾರಿಗಳ ಪದಗ್ರಹಣ’ ಕಾರ್ಯಕ್ರಮ ಮೇ.೨೬ರಂದು ಶುಕ್ರವಾರ ಸಂಜೆ ೩ ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ನೆರವೇರಲಿದೆ.
ಅಂದು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ, ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸಭಾ ಕಾರ್ಯಕ್ರಮ ಉದ್ಘಾಟಿಸುವರು.
Advertisement
ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ಕೂಳೂರು, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ತಿಳಿಸಿದ್ದಾರೆ.
Advertisement