
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಕಾರದೊಂದಿಗೆಗೆ 122 ನೇ ರಕ್ತದಾನ ಶಿಬಿರ ಜೂ.4 ರಂದು ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಎಂ. ವೈ. ಉದಯರವಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಪ್ರಕಟಣೆ ತಿಳಿಸಿದೆ.


ಜೂ.5: ಆಹಾರ ದವಸಧಾನ್ಯ ವಿತರಣೆ:
ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಹಾಗೂ ಧವಸ ಧಾನ್ಯ ವಿತರಣೆ ಕಾರ್ಯಕ್ರಮ ಸೇವಾಂಜಲಿ ಸಭಾಂಗಣದಲ್ಲಿ ಜೂ.5 ರಂದು ಸೋಮವಾರ ನಡೆಯಲಿದೆ. ಶಾಸಕ ರಾಜೇಶ್ ನಾಯ್ಕ್, ಉದ್ಯಮಿ ಭುವನೇಶ್ ಪಚ್ಷಿನಡ್ಕ ಮೊದಲಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
