
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಹಾಗೂ ಜೆಸಿಐ ಬಂಟ್ವಾಳದ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ 123ನೇ ರಕ್ತದಾನ ಶಿಬಿರ ಜೂ.18ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶೇಕ್ ಕಬೀರ್ ಅಹಮದ್, ಉದ್ಯಮಿ ಬಿ. ಸಂಜೀವ ಪೂಜಾರಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವಂತೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಹಾಗೂ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.