
ಮೊಡಂಕಾಪು: ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಮೋಡಂಕಾಪು ಇದರ 2023-24 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಸಂಸ್ಥೆಯ ಹಳೆ ವಿದ್ಯಾರ್ಥಿನಿ ಜೋಶ್ನ ವಾಸ್ ಉದ್ಘಾಟಿಸಿದರು. ಅವರು ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಚಿಕ್ಕಂದಿನಿಂದಲೇ ಬೆಳೆಸಿಕೊಂಡು ಬರಬೇಕು ಎಂದು ಅಭಿಪ್ರಾಯಪಟ್ಟರು.


ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ನವೀನ ಎ.ಸಿ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿದ್ಯಾರ್ಥಿ ಸಂಘದ ಸಲಹೆಗಾರರಾದ ಭಗಿನಿ
ಫೆಲ್ಸಿಟ ಎ.ಸಿ, ಶ್ರೀ ವಿದ್ಯಾ ಹಾಗೂ ಸುರೇಶ್ ನಂದೊಟ್ಟು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ರಾನ್ಸ್ ಸನ್ ಸ್ವಾಗತಿಸಿ, ಕಾರ್ಯದರ್ಶಿ ಕೃಪಾ ವಂದಿಸಿದರು.
