ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು. 8ರಂದು ಸಂಜೆ 6.30ಕ್ಕೆ ರೋಟರಿ ಬಿ.ಎ.ಸೋಮಯಾಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ತಿಳಿಸಿದರು.
ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಪೂರ್ವ ಗವರ್ನರ್ ಕೆ. ಕೃಷ್ಣ ಶೆಟ್ಟಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸುವರು, ಮುಖ್ಯ ಅತಿಥಿಗಳಾಗಿ ಸಹಾಯಕ ಗವರ್ನರ್ ಲಾರೆನ್ಸ್ ಗೋಂಸಾಲ್ವ್ಸ್, ವಲಯ ಲೆಫ್ಟಿನೆಂಟ್ ರವೀಂದ್ರ ದರ್ಬೆ, ಉದ್ಯಮಿ ಸುಬ್ರಾಯ ಎಂ. ಪೈ ಭಾಗವಹಿಸುವರು ಎಂದು ತಿಳಿಸಿದರು. 54 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ರೋಟರಿ ಕ್ಲಬ್ ಬಂಟ್ವಾಳದ ಸದಸ್ಯ ಪ್ರಕಾಶ್ ಕಾರಂತ್ ಅವರು ಜಿಲ್ಲಾ ಗವರ್ನರ್ ಆಗಿರುವುದು ನಮ್ಮ ಕ್ಲಬ್ಬಿಗೆ ಹೆಮ್ಮೆಯ ಸಂಗತಿಯಾಗಿದೆ. ಸೂರಿಲ್ಲದವರಿಗೆ ಮನೆ ನಿರ್ಮಾಣ, ವಿದ್ಯುತ್ ಸಂಪರ್ಕ ಇಲ್ಲದ ಒಂದು ಗ್ರಾಮಕ್ಕೆ ವಿದ್ಯುದೀಕರಣ, ಆರೋಗ್ಯ ಶಿಬಿರಗಳು, ರಕ್ತದಾನ ಶಿಬಿರ , ಸೋಲಾರ್ ವ್ಯವಸ್ಥೆ ಮೊದಲಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಆಶೋತ್ತರಗಳನ್ನು ಈಡೇರಿಸಿ ಜನಮನ್ನಣೆ ಪಡೆದುಕೊಂಡಿದೆ ಎಂದು ತಿಳಿಸಿದರು. ಈ ವರ್ಷ ಹಿಂದಿನ ಜಿಲ್ಲಾ ಯೋಜನೆಗಳಾದ ವನ ಸಿರಿ, ಜಲಸಿರಿ, ಆರೋಗ್ಯ ಸಿರಿ, ವಿದ್ಯಾಸಿರಿ ಹಾಗೂ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಕಾರ್ಯದರ್ಶಿ ಸದಾಶಿವ ಬಾಳಿಗ, ಉಪಾಧ್ಯಕ್ಷ ಬಸ್ತಿ ಮಾಧವ ಶೆಣೈ, ತರಬೇತುದಾರ ಕೆ. ನಾರಾಯಣ ಹೆಗ್ಡೆ, ಕಾಐನಿರ್ವಾಹಕ ಕಾರ್ಯದರ್ಶಿ ಬಿ. ರಿತೇಶ್ ಬಾಳಿಗ ಉಪಸ್ಥಿತರಿದ್ದರು.