
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 2023-24 ನೇ ಸಾಲಿನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರೋಟರಿ ಬಿ.ಎ. ಸೋಮಯಾಜಿ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆಯಿತು.
ನಿರ್ಗಮನ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮಾತನಾಡಿ ಕ್ಲಬ್ ಅತ್ಯುತ್ತಮ ಸೇವೆ ಮಾಡಿ ಪ್ಲಾಟಿನಂ ಪ್ಲಸ್ ಪ್ರಶಸ್ತಿ ಪಡೆಯಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಆನ್ಸ್ ಅಧ್ಯಕ್ಷೆ ಪ್ರೇಮರಾವ್ ಅನಿಸಿಕೆ ವ್ಯಕ್ತಪಡಿಸಿದರು.
ನೂತನ ಅಧ್ಯಕ್ಷರಾಗಿ ಪ್ರಕಾಶ್ ಬಾಳಿಗ, ಕಾರ್ಯದರ್ಶಿಯಾಗಿ ಸದಾಶಿವ ಬಾಳಿಗ ಮತ್ತಿತರ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು.
ನೂತನ ಅಧ್ಯಕ್ಷ ಪ್ರಕಾಶ್ ಬಾಳಿಗ ಮಾತನಾಡಿ 54 ವರ್ಷಗಳ ಇತಿಹಾಸ ಹೊಂದಿರುವ ರೋಟರಿ ಕ್ಲಬ್ ಬಂಟ್ವಾಳ ಸಮಾಜ ಮುಖಿ ಸೇವಾ ಕಾರ್ಯಗಳನ್ನು ನಡೆಸುವ ಮೂಲಕ ಗುರುತಿಸಿಕೊಂಡಿದ್ದು ಪ್ರಸ್ತುತ ಸಾಲಿನಲ್ಲೂ ಸೇವಾ ಕಾರ್ಯ ಮಾಡಲು ಸಹಕಾರ ನೀಡುವಂತೆ ವಿನಂತಿಸಿಕೊಂಡರು.

ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹೊಸ ಸದಸ್ಯರ ಯಾಸೀರ್ ಕಲ್ಲಡ್ಕ ಅವರನ್ನು ಕ್ಲಬ್ ಗೆ ಸೇರಿಸಿ ಕೊಳ್ಳಲಾಯಿತು.
ಪದಗ್ರಹಣ ಅಧಿಕಾರಿಯಾಗಿ ಪೂರ್ವ ಜಿಲ್ಲಾ ಗವರ್ನರ್ ಕೆ. ಕೃಷ್ಣ ಶೆಟ್ಟಿ ಭಾಗವಹಿಸಿ ಮಾತನಾಡಿ ರೋಟರಿ ಕ್ಲಬ್ ಬಂಟ್ವಾಳ ರೋಟರಿ ಜಿಲ್ಲೆಯಲ್ಲಿಯೇ ಪ್ರತಿಷ್ಠಿತ ಘಟಕವಾಗಿದ್ದು ವಿಭಿನ್ನ ಹಾಗೂ ವಿಶಿಷ್ಠ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದೆ ಎಂದರು.


ಮುಖ್ಯ ಅತಿಥಿ ಉದ್ಯಮಿ ಸುಬ್ರಾಯ ಎಂ . ಪೈ ಮಾತನಾಡಿ ಇಂದು ಭಾರತ ಪೋಲೀಯೋ ಮುಕ್ತವಾಗಲು ರೋಟರಿ ಸಂಸ್ಥೆ ಕಾರಣ ಎನ್ನುವುದು ಅಭಿನಂದನೀಯ. ರೋಟರಿಯ ಸೇವೆ ಅಭೂತಪೂರ್ವವಾದುದು ಎಂದು ತಿಳಿಸಿದರು.
ಸಹಾಯಕ ಗವರ್ನರ್ ಲಾರೆನ್ಸ್ ಗೋನ್ಸಾಲ್ವಸ್ ಕ್ಲಬ್ ಬುಲೆಟಿನ್ ರೋಟ್ ವಾಲಾ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಝೋನಲ್ ಲೆಫ್ಟಿನೆಂಟ್ ರವೀಂದ್ರ ದರ್ಬೆ ಉಪಸ್ಥಿತರಿದ್ದರು. ನಿರ್ಗಮನ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಸ್ವಾಗತಿಸಿದರು, ಕಾರ್ಯದರ್ಶಿ ಭಾನುಪ್ರಕಾಶ್ ವರದಿ ವಾಚಿಸಿದರು. ನೂತನ ಕಾರ್ಯದರ್ಶಿ ಸದಾಶಿವ ಬಾಳಿಗ ವಂದಿಸಿದರು. ಸದಸ್ಯ ಅಹಮ್ಮದ್ ಮುಸ್ತಾಫ ಕಾರ್ಯಕ್ರಮ ನಿರೂಪಿಸಿದರು.
