ಬಂಟ್ವಾಳ: ಇಲ್ಲಿನ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಬಿ. ಸಿ ರೋಡಿನ ಆಡಳಿತ ಸೌಧದ ಮುಂಭಾಗದಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಬಳಿಕ ಸುದ್ದಿಗಾರರರೊಂದಿಗೆ ರಮಾನಾಥ ರೈ ಮಾತನಾಡಿ ಲೋಕಸಭಾ ಸದಸ್ಯರಾಗಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ ರಾಹುಲ್ ಗಾಂಧಿಯವಬರ ಸದಸ್ಯತ್ವವನ್ನು ಅನರ್ಹಗೊಳಿಸಿ ಲೋಕಸಭೆಯಲ್ಲಿ ಪ್ರತಿಪಕ್ಷದ ಧ್ವನಿಯಾಗಿ ಮಾತನಾಡುವ ಅವಕಾಶವನ್ನು ನಿರಾಕರಿಸಲಾಗಿದೆ, ಪ್ರಧಾನಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಜನರಿಗೆ ತಪ್ಪಾಗಿ ಅರ್ಥೆಸಿ, ಬಿಜೆಪಿಯ ಕುಮ್ಮಕ್ಕಿನಂತೆ ಪಿತೂರಿಯ ಭಾಗವಾಗಿ ಅವರ ಲೋಕಸಭಾ ಸದಸದ್ಯತ್ವವನ್ನು ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಹಿತ ಅನೇಕ ಕಾಂಗ್ರೆಸ್ ಮುಖಂಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗ ಪ್ರಕರಣ ದಾಖಲಿಸುವ ಕೆಲಸವನ್ನು ಯಾರೂ ಮಾಡಿಲ್ಲ ಆದರೆ ರಾಹುಲ್ಗಾಂಧಿಯ ಬಗ್ಗೆ ಉದ್ದೇಶ ಪೂರ್ವಕವಾಗಿ ಸದಸ್ಯತ್ವ ಅನರ್ಹಗೊಳಿಸುವ ಕೆಲಸ ಆಗಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಪಕ್ಷದ ಪ್ರಮುಖರಾದ ಅಶ್ವನಿ ಕುಮಾರ್ ರೈ, ಪದ್ಮಶೇಖರ್ ಜೈನ್, ಮಾಯಲಪ್ಪ ಸಾಲ್ಯಾನ್, ಸದಾಶಿವ ಬಂಗೇರ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಬಿ. ಮೋಹನ್, ಲೋಲಾಕ್ಷ ಶೆಟ್ಟಿ, ವಾಸು ಪೂಜಾರಿ, ಜೋಸ್ಫಿನ್ ಡಿಸೋಜಾ, ವೆಂಕಪ್ಪ ಪೂಜಾರಿ, ಸುರೇಶ್ ಕುಮಾರ್ ನಾವೂರು, ಲುಕ್ಮಾನ್ ಬಂಟ್ವಾಳ, ಪದ್ಮನಾಭ ರೈ, ಮಹಮ್ಮದ್ ನಂದರಬೇಟಟು, ಮಹಮ್ಮದ್ ನಂದಾವರ, ಲೋಕೇಶ್ ಸುವರ್ಣ, ಅಬ್ಬಾಸ್ ಅಲಿ ಲವೀನಾ ವಿಲ್ಮಾ ಮೋರಸ್, ಜೆಸಿಂತಾ ಡಿಸೋಜಾ, ದಿನೇಶ್ ಸುಂದರ ಶಾಂತಿ, ಮೊದಲಾದವರು ಉಪಸ್ಥಿತರಿದ್ದರು.