ಬಂಟ್ವಾಳ: ಸರ್ಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಅವರು ವಿದ್ಯಾರ್ಥಿ ಸಂಘ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಶ್ರೀಧರ್ ಎಚ್. ಜಿ. ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನವನ್ನು ಬೋಧಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇಶದ ಸಂವಿಧಾನದ ಮಹತ್ವವನ್ನು ವಿವರಿಸುತ್ತಾ ಕಾಲೇಜಿನ ನೀತಿ ನಿಯಮಗಳನ್ನು ಪಾಲಿಸುವ ಅವಶ್ಯಕತೆಯನ್ನು ತಿಳಿ ಹೇಳಿದರು.ಸರಕಾರಿ ಪದವಿ ಪೂರ್ವ ಕಾಲೇಜು, ಸಿದ್ಧಕಟ್ಟೆಯ ರಾಜ್ಯ ಶಾಸ್ತ್ರ ಉಪನ್ಯಾಸಕ ಶೀನಪ್ಪ ಎನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿ ಸಂಸತ್ ನ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳಲ್ಲಿ ಇರಬೇಕಾದ ಪ್ರಾಮಾಣಿಕತೆ, ಪ್ರಯತ್ನ ಶೀಲತೆ ಹಾಗೂ ಬಾಳಿಗೊಂದು ಗುರಿ ಇರಬೇಕಾದ ಅಗತ್ಯತೆಯನ್ನು ವಿವರಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಪ್ರಭಾಕರ ಶೆಟ್ಟಿ, ವಾಮದಪದವು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸಿ, ನಿರಂತರ ಪ್ರಯತ್ನದಿಂದ ಅತ್ಯುತ್ತಮ ನಾಗರಿಕರಾಗಿ ಮೂಡಿಬರಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ನಾಗರಾಜ ಶೆಟ್ಟಿ, ಹಂಝ ಬಸ್ತಿಕೋಡಿ, ಯಶೋಧರ ಶೆಟ್ಟಿ, ರಮೇಶ್ ಶೆಟ್ಟಿ, ಕಾಲೇಜು ವಿದ್ಯಾರ್ಥಿ ಸಂಘದ ನಾಯಕ ದ್ವಿತೀಯ ಪಿಯುಸಿ ಕಲಾ ವಿಭಾಗದ ಕಾರ್ತಿಕ್ ಹಾಗೂ ಕಾರ್ಯದರ್ಶಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶಮಾ ಉಪಸ್ಥಿತರಿದ್ದರು.ಇತಿಹಾಸ ಉಪನ್ಯಾಸಕ ಸುಧಾಕರ ಪ್ರಭು ಸ್ವಾಗತಿಸಿದರು.ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿನುತಾ ಪ್ರಾರ್ಥಿಸಿದರು, ಮಾಡಿದರು ಮತ್ತು ದ್ವಿತೀಯ ಪಿಯುಸಿ ಕಲಾ ವಿಭಾಗದ ದೀಪ್ತಿ ವಂದಿಸಿದರು.ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಕ್ಷಾ ಕಾರ್ಯಕ್ರಮ ನಿರೂಪಿಸಿದರು.