ಬಂಟ್ವಾಳ: ಜೆಸಿಐ ಶಂಕರನಾರಾಯಣದ ಆತಿಥ್ಯದಲ್ಲಿ ನಡೆದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ, ವ್ಯವಹಾರ ಸಮ್ಮೇಳನದಲ್ಲಿ ಜೆಸಿಐ ಬಂಟ್ವಾಳದ ಉಪಾಧ್ಯಕ್ಷ ವಚನ್ ಶೆಟ್ಟಿ ಯವರಿಗೆ ಉದ್ಯಮ ಕ್ಷೇತ್ರದ ಸಾಧನೆಗಾಗಿ ಪಂಚರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ನಾಗರಾಜ್ ಪೂಜಾರಿ, ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಉಪಾಧ್ಯಕ್ಷ ಕಿಶೋರ್ ಆಚಾರ್ಯ, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಸದಸ್ಯರಾದ ಸಂತೋಷ್ ಜೈನ್, ಉಮೇಶ್ ಪೂಜಾರಿ ಉಪಸ್ಥಿತರಿದ್ದರು.
Advertisement
Advertisement