ಬಂಟ್ಚಾಳ: ಭಾರಿ ಮಳೆಗೆ ಅಮ್ಟಾಡಿ ಗ್ರಾಮದ ಮಹಲ್ ತೋಟ ರಸ್ತೆ ಬಳಿ ಬೃಹತ್ ಗಾತ್ರದ ಕಲ್ಲೊಂದು ರಸ್ತೆಗೆ ಉರುಳಿ ಬಿದ್ದಿದೆ. ಲೊರಟ್ಟೊ ಪದವಿನಿಂದ ಮಹಲ್ ತೋಟ ಸಂಪರ್ಕಿಸುವ ರಸ್ತೆ ಇದಾಗಿದ್ದು ಬೆಳಿಗ್ಗೆ 8.30 ರ ವೇಳೆಗೆ ಈ ಘಟನೆ ನಡೆದಿದೆ. ಪ್ರತಿದಿನ ಈ ರಸ್ತೆಯ ಮೂಲಕ ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದು ಶಾಲೆಗೆ ರಜೆ ಇದ್ದುದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಮ್ಟಾಡಿ ಪಂಚಾಯತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಸ್ಥಳೀಯರ ಸಹಕಾರದೊಂದಿಗೆ ಕಲ್ಲು ತೆರವು ಕಾರ್ಯ ಕೈ ಗೊಂಡಿದ್ದಾರೆ.
Advertisement
Advertisement