ಬಂಟ್ವಾಳ: ಅರಳ ಗ್ರಾಮದ ದೇಂಬುಡೆ ಎಂಬಲ್ಲಿ ಗುಡ್ಡ ಕುಸಿದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ನಿವಾಸಿ ರುಡಾಲ್ಫ್ ಮರ್ಕ್ ಲೋಬೋ ಅವರ ಮನೆ ಬಳಿ ಈ ಘಟನೆ ನಡೆದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಗುಡ್ಡ ಕುಸಿದು ಮನೆಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಬಳಿಕ ಮಣ್ಣು ಕುಸಿಯದಂತೆ ಕಾಂಕ್ರೀಟ್ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಆದರೆ ಈ ಭಾರಿ ಮತ್ತೆ ಮೇಲ್ಭಾದ ಗುಡ್ಡ ಕುಸಿದು ಆತಂಕದ ಸ್ಥಿತಿ ನಿರ್ಮಾಣಗೊಂಡಿದೆ. ಗುಡ್ಡದಲ್ಲಿದ್ದ ಬಂಡೆಕಲ್ಲುಗಳು ಮಣ್ಣಿನೊಂದಿಗೆ ಉದುರಿ ಬೀಳುತ್ತಿದೆ.
Advertisement
Advertisement