ಬಂಟ್ವಾಳ: ಸಜೀಪಮೂಡ ಸರಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ಶನಿವಾರ ಶಾಲೆಯ ಜ್ಞಾನಜ್ಯೋತಿ ರಂಗ ಮಂದಿರದಲ್ಲಿ ನಡೆಯಿತು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್ಡಿಎಂಸಿ ಸದಸ್ಯರಾದ ಸೀತಾರಾಮ ಅಗೋಳಿಬೆಟ್ಟು ಹಾಗೂ ನಳಿನಾಕ್ಷಿ ಭಾಗವಹಿಸಿದ್ದರು. ಚಿತ್ರಕಲಾ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಶಿಕ್ಷಕಿ ಆಲಿಸ್ ಪಾಸ್ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಯರಾದ ಸಮೀಕ್ಷ ನಿರೂಪಿಸಿ, ಶಿವಾನಿ ವಂದಿಸಿದರು.
Advertisement