ಬಂಟ್ವಾಳ: ಸಜೀಪಮುನ್ನೂರು ಮೂರ್ತೇದಾರರ ಸೇವಾ ಸಹಕಾರಿ ಸಂಘ ಇದರ 12ನೇ ಕಂಬಳ ಬೆಟ್ಟು ಶಾಖೆಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಬಿಡುಗಡೆಗೊಳಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನ ಪಾಲು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ, ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
Advertisement
ಕಂಬಳಬೆಟ್ಟು ಶಾಖೆ ಸೆ. 3ರಂದು ಭಾನುವಾರ ಕಂಬಳಬೆಟ್ಟುವಿನ ದರ್ಬಾರ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಳ್ಳಲಿದೆ. ಕಲ್ಬುರ್ಗಿಯ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠಾಧಿಪತಿ ಶ್ರೀ ಡಾ. ಪ್ರಣವಾನಂದ ರಾಮ್ ಸ್ವಾಮೀಜಿ ಉದ್ಘಾಟಿಸುವರು. ಪುತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ಬಿ. ರಮನಾಥ ರೈ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
Advertisement