ಬಂಟ್ವಾಳ: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆ ಬಿ. ಸಿ. ರೋಡಿನ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಶ್ರೀ ರಕ್ತೇಶ್ವರಿ ದೇವಸ್ಥಾನದ ವರೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಿ ಮಾತನಾಡಿ ದೇಶದ ಆಡಳಿತದಲ್ಲಿ ಪರಿವರ್ತನೆಯಾಗಿದೆ, ಭಾರತ ಆರ್ಥಿಕವಾಗಿ ವಿಕಸಿತಗೊಂಡಿದೆ, ಸ್ವಾಭಿಮಾನ, ಸ್ವಾವಲಂಬಿ, ಸ್ವದೇಶಿ ಚಿಂತನೆಗಳೊಂದಿಗೆ ಪರಿವರ್ತನೆಯ ಭಾರತ ಎದ್ದು ನಿಲ್ಲುತ್ತಿದೆ ಎಂದು ತಿಳಿಸಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ದೇಶಕ್ಕೆ ಉತ್ತಮ ನಾಯಕತ್ವ ಸಿಕ್ಕಿದ್ದು ಜಗತ್ತಿನ ಶಕ್ತಿಶಾಲಿ ದೇಶವಾಗಿ ಭಾರತ ಹೊರಹೊಮ್ಮುತ್ತಿದೆ ಎಂದು ತಿಳಿಸಿದರು.
ಬಿಕೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಮಾಜಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ. ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಮಾಧ್ಯಮ ಪ್ರಮುಖ್ ಸಂದೇಶ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.