ಬಂಟ್ವಾಳ: ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಉಚಿತ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಾಣಿ ಕಾರ್ಡ್ ಹಾಗೂ ಸಸಿಗಳ ವಿತರಣಾ ಸಮಾರಂಭ ಆ. 27ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ಎಸ್.ಬಿ ಕೂಡಲಗಿ ಉದ್ಘಾಟಿಸುವರು, ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸತೀಶ್ ಅರಳ ಅಧ್ಯಕ್ಷತೆ ವಹಿಸುವರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮನೀಶ್ ನಾಯಕ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವರು, ಜಿಲ್ಲಾ ಉದ್ಯೋಗಾಧಿಕಾರಿ ಎಚ್ಚರಪ್ಪ ಬಡಿಗೇರ ಉದ್ಯೋಗ ಕಾರ್ಡ್ ವಿತರಿಸುವರು, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜಾ ಸಸಿಗಳನ್ನು ವಿತರಿಸುವರು.
ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ದಿಲೀಪ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ ಕುಮಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಉಪನೋಂದಣಾಧಿಕಾರಿ ಕವಿತಾ ಎ.ಸಿ., ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಉಪನೀರೀಕ್ಷಕ ಹರೀಶ್ ಎಂ.ಆರ್., ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ ಎನ್., ನಗರ ಪೊಲೀಸ್ ಠಾಣೆ ಉಪನಿರೀಕ್ಷಕ ರಾಮಕೃಷ್ಣ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೀಲಾವತಿ, ಕಾರ್ಮಿಕ ನಿರೀಕ್ಷಕಿ ಮರ್ಲಿನ್ ಗ್ರೇಸಿಯಾ ಡಿಸೋಜ, ಬಂಟ್ವಾಳ ತಾಲೂಕು ಪಂಚಾಯತಿ ವ್ಯವಸ್ಥಾಪಕಿ ಶಾಂಭವಿ ಎಸ್.ರಾವ್, ಬಂಟ್ವಾಳ ಪುರಸಭೆ ಪ್ರಥಮ ದರ್ಜೆ ಸಹಾಯಕ ಅಬ್ದುಲ್ ರಝಾಕ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ನ್ಯಾಯವಾದಿ ಉಮೇಶ್ ಕುಮಾರ್ ವೈ, ಪತ್ರಕರ್ತ ಸಂದೀಪ್ ಸಾಲ್ಯಾನ್, ವಕೀಲ ತುಳಸೀದಾಸ್ ಆರ್. ಮೊದಲಾದವರು ಭಾಗವಹಿಸುವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.