

ಬಂಟ್ವಾಳ: 2022-23 ನೇ ಸಾಲಿನಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘವು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬ್ಯಾಂಕಿನ ಅಧ್ಯಕ್ಷ ಸುರೇಶ್ ಕುಲಾಲ್ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೋಜ ಮೂಲ್ಯ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.


