
ಬಂಟ್ವಾಳ: ಚಂದ್ರಯಾನ 3 ಯಶಸ್ಸಿಗೆ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಿ.ಸಿ ರೋಡು ರಕ್ತೇಶ್ವರಿ ದೇವಸ್ಥಾನದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.


ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಮಾಡಿ ಯಶಸ್ಸಿಗಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಪ್ರಖಂಡ ಕಾರ್ಯದರ್ಶಿ ದೀಪಕ್ ಅಜೆಕಳ, ಚಂದ್ರ ಕಲಾಯಿ, ಅಶೋಕ್ ಶೆಟ್ಟಿ ಸರಪಾಡಿ, ಪ್ರಣಮ್ ಅಜ್ಜಿಬೆಟ್ಟು, ಕೇಶವ ದೈಪಲ ಮತ್ತಿತರರು ಉಪಸ್ಥಿತರಿದ್ದರು.

