

ಬಂಟ್ವಾಳ: ಬಿ.ಸಿ.ರೋಡಿನ ರೈಲು ನಿಲ್ದಾಣ ಬಳಿ ರಿಕ್ಷಾ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಘಟನೆಯ ತೀವ್ರತೆಗೆ ರಿಕ್ಷಾ ಮುಖಭಾಗ ನುಜ್ಜುಗುಜ್ಜಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರುಶೀಲನೆ ನಡೆಸುತ್ತಿದ್ದಾರೆ.


