
ಬಂಟ್ವಾಳ: ಹಿರಿಯ ರಂಗಕರ್ಮಿ ನಟ ನಿರ್ದೇಶಕ, ಕಾರ್ಯಕ್ರಮ ನಿರೂಪಕ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ರಂದು ನಿಧನರಾದರು.

ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ ,ರಂಗ ನಟ ನಿರ್ದೇಶಕರಾಗಿ,ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು.
ಮೃತರು ಪತ್ನಿ, ಪುತ್ರಿ, ಸಹೋದರ, ಸಹೋದರಿ ಯರು ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.