ಬಂಟ್ವಾಳ: ಜೆಸಿಐ ಬಂಟ್ವಾಳ ಇದರ ಜೇಸಿ ಸಪ್ತಾಹದ ಅಂಗವಾಗಿ ಜೆಸಿಐ ಬಂಟ್ವಾಳ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಇದರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಬಾ ಕಾರ್ಡ್ ನೋಂದಾವಣೆ ಕಾರ್ಯಕ್ರಮ ಶುಕ್ರವಾರ ಭಂಡಾರಿಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಉದ್ಘಾಟಿಸಿದರು. ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಎಸ್ಕೆಪಿಎ ಬಂಟ್ವಾಳ ವಲಯ ಅಧ್ಯಕ್ಷ ಹರೀಶ್ ಕುಂದರ್, ಜೆಸಿಐ ಬಂಟ್ವಾಳದ ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಪೂರ್ವಾಧ್ಯಕ್ಷರಾದ ಸದಾನಂದ ಬಂಗೇರ, ಯತೀಶ್ ಕರ್ಕೆರಾ, ಸಂತೋಷ್ ಜೈನ್, ಉಪಾಧ್ಯಕ್ಷರಾದ ಕಿಶೋರ್ ಆಚಾರ್ಯ, ಗಣೇಶ್ ಕುಲಾಲ್, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಸದಸ್ಯರಾದ ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.
Advertisement