ಬಂಟ್ವಾಳ: ಜೆಸಿಐ ಬಂಟ್ವಾಳ ಇದರ ಜೇಸಿ ಸಪ್ತಾಹದ ಅಂಗವಾಗಿ 2ನೇ ದಿನದ ಕಾರ್ಯಕ್ರಮವಾಗಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಕಾರ್ಲ, ಪೆರ್ನೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರಿಸಲಾಯಿತು. ಕಾರ್ಯಕ್ರಮ ಸಂಯೋಜಕ, ಪೂರ್ವಧ್ಯಕ್ಷ ಸುರೇಶ್ ಕುಮಾರ್ ನಾವೂರು ಉದ್ಘಾಟಿಸಿದರು. ಅಧ್ಯಕ್ಷ ರಾಜೇಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷ ಯತೀಶ್ ಕರ್ಕೇರ, ಸದಸ್ಯರಾದ ನಾರಾಯಣ ಸಿ.ಪೆರ್ನೆ, ಸುಧಾಕರ್ ಶೆಟ್ಟಿ, ವಿಶು ಕುಂದರ್, ಕಿರಣ್ ಶಾಲಾ ಮುಖ್ಯ ಶಿಕ್ಷಕಿ ಜಾನಕಿ ಉಪಸ್ಥಿತರಿದ್ದರು.
Advertisement
Advertisement