ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡ ಇದರ ಪ್ರೌಢಶಾಲಾ ವಿಭಾಗದ ಮೂರು ದಿನಗಳ ಚಿಗುರು ವ್ಯಕ್ತಿತ್ವ ವಿಕಸನ ಶಿಬಿರವನ್ನು ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಅಧ್ಯಕ್ಷೆ ರಮಾ ಜಿ. ಆಚಾರ್ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿ ಶುಭ ಹಾರೈಸಿದರು.
Advertisement
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿ, ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್, ಎಸ್ ಡಿಎಂ ಸಿ ಸದಸ್ಯ ಸೀತಾರಾಮ ಅಗೋಳಿಬೆಟ್ಟು, ಸಂಪನ್ಮೂಲ ವ್ಯಕ್ತಿ ಶೀನ ನಾಡೋಳಿ ಮೊದಲಾದವರು ಉಪಸ್ಥಿತರಿದ್ದರು.
ಉಪಪ್ರಾಂಶುಪಾಲೆ ಆಲಿಸ್ ಪಾಯಿಸ್ ಸ್ವಾಗತಿಸಿದರು, ಶಿಬಿರ ಸಂಯೋಜಕ ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಚಕರಾದ ಸುಲೋಚನ ಭಟ್ ವಂದಿಸಿದರು, ವೆಂಕಟರಮಣ ಆಚಾರ್ ಕಾರ್ಯಕ್ರಮ ನಿರೂಪಿಸಿದರು.
Advertisement