ಬಂಟ್ವಾಳ: ತಾಲೂಕಿನ ಗ್ರಾಮೀಣ ಪ್ರದೇಶವಾದ ಸಜೀಪಮೂಡ ಗ್ರಾಮದಲ್ಲಿ ಸ್ಥಾಪನೆಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಕನಿಷ್ಠ ಅವಧಿಯಲ್ಲಿಯೇ ಗರಿಷ್ಠ ಸಾಧನೆಯನ್ನು ಮಾಡಿಕೊಂಡು ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿಕೊಂಡು ಮುನ್ನಡೆಯುತ್ತಿದೆ.
ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮುಂದಾಳತ್ವದಲ್ಲಿ, ಅನುಭವಿ ನಿರ್ದೇಶಕರ ಮಾರ್ಗದರ್ಶನದಲ್ಲಿ, ಕ್ರಿಯಾಶೀಲ ಸಿಬ್ಬಂದಿಗಳ ಸಹಕಾರದೊಂದಿಗೆ ಸಂಘ ಲಾಭದಾಯಕವಾಗಿ ಪ್ರಗತಿಯ ಹೆಜ್ಜೆ ಇಟಿದ್ದು ಸಂಘದ 13ನೇ ಶಾಖೆ ಉದ್ಘಾಟನೆಗೆ ಸಜ್ಜುಗೊಂಡಿದೆ.
ನ. 5ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಪುಣಚ ಪರಿಯಲ್ತಡ್ಕ ಪ್ರಗತಿ ಕಾಂಪ್ಲೆಕ್ಸ್ನಲ್ಲಿ ಸಂಘದ ನೂತನ 13ನೇ ಶಾಖೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ. ರಮಾನಾಥ ರೈ, ಪುಣಚ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಅಧ್ಯಕ್ಷ, ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಸದಸ್ಯ ಎಸ್. ಆರ್. ರಂಗಮೂರ್ತಿ, ಪುಣಚ ಗ್ರಾಮ ಪಂಚಾಯತ್. ಅಧ್ಯಕ್ಷೆ ಬೇಬಿ, ಪರಿಯಲ್ತಡ್ಕ ಜುಮ್ಮಾ ಮಸೀದಿ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ. ಎಸ್. ಮಹಮ್ಮದ್, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಮಾಜಿ ಅಧ್ಯಕ್ಷ ಹಾಗೂ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಬೆಳ್ತಂಗಡಿ ಇದರ ನಿರ್ದೇಶಕ ಡಾ. ರಾಜರಾಮ್ ಕೆ.ಬಿ., ಪುತ್ತೂರಿನ ಹಿರಿಯ ನ್ಯಾಯವಾದಿ, ಪುತ್ತೂರು ಟೌನ್ ಕೋ ಅಪರೇಟಿವ್ ಬ್ಯಾಂಕ್ ಲಿ. ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ, ಪುಣಚ ಮನೆಲಾ ಕ್ರಿಸ್ತರಾಜ ಚರ್ಚ್ನ ಧರ್ಮಗುರುಗಳಾದ ವಂ| ಫಾ| ನೆಲ್ಸನ್ ಒಲಿವೆರಾ, ಪರಿಯಲ್ಲಡ್ಕ ಪ್ರಗತಿ ಕಾಂಪ್ಲೆಕ್ಸ್ ಮಾಲಕ ಎಚ್. ನಾರಾಯಣ ಪೂಜಾರಿ, ಪುಣಚ ಬಿಲ್ಲವ ಸಂಘ ಅಧ್ಯಕ್ಷ , ಪುಣಚ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು, ವಿಟ್ಲ ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ) ಮಾಜಿ ಅಧ್ಯಕ್ಷ ಜನಾರ್ದನ ಕೆ.ಕೆ. ಭಾಗವಹಿಸುವರು.
ಮೂರ್ತೆದಾರಿಕೆ ಮಾಡುವ ಕುಲ ಕಸುಬುದಾರರ ಶ್ರೇಯೋಭಿವೃದ್ಧಿ ಹಾಗೂ ಅವರ ಆರ್ಥಿಕ ಜೀವನ ಮಟ್ಟ ಸುಧಾರಿಸುವ ಸದುದ್ದೇಶದೊಂದಿಗೆ 1991ರಲ್ಲಿ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಸುಭಾಷ್ನಗರದ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಪ್ರಾರಂಭಗೊಂಡ ಬ್ಯಾಂಕ್, 2005 ನವೆಂಬರ್ 18ರಂದು ಬೊಳ್ಳಾಯಿಯಲ್ಲಿ ಬ್ಯಾಂಕಿಂಗ್ ವ್ಯವಹಾರವನ್ನು ಆರಂಭಿಸಿತು. ಬಂಟ್ವಾಳ ತಾಲೂಕಿನ ಎಲ್ಲಾ ಭಾಗಗಳಲ್ಲಿರುವ ಮೂರ್ತೆದಾರರಿಗೆ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಹಂತ ಹಂತವಾಗಿ ಬೋಳಂತೂರು, ಚೇಳೂರು, ಫಜೀರು, ವಾಮದಪದವು, ಸಿದ್ದಕಟ್ಟೆ, ಅಣ್ಣಳಿಕೆ, ಮಾರ್ನಬೈಲು, ಮಣಿಹಳ್ಳ, ಕಾವಳಮುಡೂರು ಎನ್.ಸಿ.ರೋಡು, ಸಾಲೆತ್ತೂರು,ಕಂಬಳಬೆಟ್ಟು ಶಾಖೆಗಳನ್ನು ತೆರೆದು ಬ್ಯಾಂಕಿಂಗ್ ಸೇವೆಗಳನ್ನು ನೀಡುತ್ತಿದೆ. ಗ್ರಾಹಕರಿಗೆ ಕಡಿಮೆ ಬಡ್ಡಿದರದಲ್ಲಿ ಆಭರಣ ಸಾಲ, ಅಡಮಾನ ಸಾಲ, ವಾಹನ ಸಾಲ, ಮೂರ್ತೆದಾರಿಕೆ ಸಾಲ, ವ್ಯಾಪಾರ ಸಾಲ, ವೈಯಕ್ತಿಕ ಸಾಲ, ಠೇವಣಾತಿ ಸಾಲ, ಸ್ವಸಹಾಯ ಸಾಲ, ಮಹಿಳೆಯರಿಗೆ ತ್ವರಿತ ಸಾಲ, ಪಿಗ್ಮಿ ಮುಂಗಡ ಸಾಲವನ್ನು ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ಮತ್ತು ಸಂಘ ಸಂಸ್ಥೆಗಳ ಠೇವಣಿಗೆ 0.5% ಹೆಚ್ಚುವರಿ ಬಡ್ಡಿ ನೀಡಲಾಗುತ್ತಿದೆ, ಸಿದ್ದಕಟ್ಟೆ ಶಾಖೆಯಲ್ಲಿ ಇ- ಸ್ಟ್ಯಾಂಪಿಂಗ್ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಹಾಗೂ ನೂತನ ಶಾಖೆಯಲ್ಲಿ ಇ ಸ್ಟ್ಯಾಂಪ್ ಸೌಲಭ್ಯ ಲಭ್ಯವಿರುತ್ತದೆ.
ಸಂಘವು ಗುರುಶ್ರೀ ಎಂಬ ಹೆಸರಿನಲ್ಲಿ ಸ್ವಸಹಾಯ ಗುಂಪುಗಳನ್ನು ರಚಿಸಿದ್ದು ಸ್ವಸಹಾಯ ಸಂಘದ ಸದಸ್ಯರಿಗೆ ಅತೀ ಕಡಿಮೆ ಅವಧಿಯಲ್ಲಿ ಬ್ಯಾಂಕ್ ಸಾಲವನ್ನು ನೀಡುವ ಯೋಜನೆಯನ್ನು ಹೊಂದಿದೆ. ಸೇವಾ ಕಾರ್ಯವಾಗಿ ಸಂಘದ ಸದಸ್ಯರಿಗೆ ವಿದ್ಯಾರ್ಥಿ ವೇತನ, ಕಡುಬಡತನದಲ್ಲಿರುವ ಅನಾರೋಗ್ಯ ಪೀಡಿತ ಮೂರ್ತೆದಾರರಿಗೆ ಸಹಾಯಧನ ನೀಡಲಾಗುತ್ತಿದೆ. ಪ್ರತೀವರ್ಷ ಹಿರಿಯ ಮೂರ್ತೆದಾರರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಹಾಗೂ ಕಡು ಬಡತನದಲ್ಲಿರುವ ಸದಸ್ಯರ ಮಕ್ಕಳನ್ನು ವಿದ್ಯಾಬ್ಯಾಸಕ್ಕಾಗಿ ದತ್ತು ಸ್ವೀಕರಿಸುವ ಯೊಜನೆಯನ್ನು ಸಂಘವು ಹೊಂದಿರುತ್ತದೆ.
ಪ್ರಸ್ತುತ ಒಟ್ಟು 10585 ಸದಸ್ಯರನ್ನು ಹೊಂದಿ161.75 ಕೋಟಿ ರೂಪಾಯಿ ವ್ಯಾಪಾರ ವಹಿವಾಟನ್ನು ನಡೆಸಿದೆ. ಈ ವರ್ಷ ೧೭,೨೨,೦೦೭.೬೫ ರೂಪಾಯಿ ವಾರ್ಷಿಕ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲಾಗಿದೆ. ೨೫,೫೩,೨೮,೧೩೩ ರೂಪಾಯಿ ಸಾಲ ನೀಡಿದ್ದು, ೩೦,೨೪,೫೦,೬೩೧.೬೯ ರೂಪಾಯಿ ಠೇವಣಾತಿ ಇದೆ. ೨೩,೧೩,೨೨೫ ಷೇರುಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಶಾಖೆಗಳನ್ನು ಕಾರ್ಯವ್ಯಾಪ್ತಿಯಲ್ಲಿ ತೆರೆಯುವ ಯೋಜನೆಯನ್ನು ಸಂಘ ಹೊಂದಿದೆ. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಿಂದ ಮೊದಲ್ಗೊಂಡು ಎಲ್ಲಾ ಸಿಬ್ಬಂದಿಗಳು ಮಹಿಳೆಯರೇ ಆಗಿದ್ದು ಮಹಿಳೆಯರ ಉದ್ಯೋಗ ಹಾಗೂ ಸ್ವಾವಲಂಬಿ ಬದುಕಿಗೆ ನಮ್ಮ ಸಂಘ ಅವಕಾಶ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ಆರಂಭಿಸಿ ಹೆಚ್ಚಿನ ಮಹಿಳೆಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.
ನಮ್ಮ ಸಂಘದ ಪ್ರಧಾನ ಕಚೇರಿಗೆ ಸ್ವಂತ ಕಟ್ಟಡವನ್ನು ಹೊಂದುವ ಉದ್ದೇಶದಿಂದ ಸಜೀಪಮೂಡ ಗ್ರಾಮದ ಸುಭಾಷ್ನಗರದಲ್ಲಿ 0.50 ಎಕ್ರೆ ಜಮೀನು ಖರೀದಿಸಲಾಗಿದ್ದು ಆದಷ್ಟು ಶೀಘ್ರ ಸ್ವಂತ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಮುಂದಡಿ ಇಡಲಿದ್ದೇವೆ.
ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ, ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಬೀಡಿನಪಾಲು, ನಿರ್ದೇಶಕರಾಗಿ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಶ್ರೀಮತಿ ಕೆ. ಸುಜಾತ ಎಂ., ಶ್ರೀಮತಿ ವಾಣಿವಸಂತ, ಅರುಣ್ ಕುಮಾರ್ ಎಂ. ಆಶೀಶ್ ಪೂಜಾರಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಮಮತಾ ಜಿ. ಸಂಘವನ್ನು ಮುನ್ನಡೆಸುತ್ತಿದ್ದಾರೆ.
—