
ಬಂಟ್ವಾಳ: ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಬೆಂಗಳೂರು ಇದರ ಆಶ್ರಯದಲ್ಲಿ ಅ.28ಮತ್ತು 29 ರಂದು ಬೆಂಗಳೂರಿನಲ್ಲಿ ನಡೆದ 14ರಿಂದ 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ ಬಾಲಕಿಯರ ರಾಜ್ಯಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ವೆಂಕಟೇಶ್ ಬೆಳ್ಳಿ ಪದಕ, ಸತೀಶ್ ಹಾಗೂ ಜತೀನ್ ಅಯ್ಯಪ್ಪ ಕಂಚಿನ ಪದಕ ಗೆದ್ದುಕೊಂಡು ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.


ಇವರು ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾರೆ. ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಟೀಮ್ ಮ್ಯಾನೇಜರ್ ಜಯಂತ್ ಆಚಾರ್ಯ ಹಾಗೂ ಸಹಾಯಕ ತರಬೇತುಗಾರ್ತಿ ಅಸ್ಮಿತಾ ರೈ ಸಹಕರಿಸಿದ್ದಾರೆ.