ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವು ಜೀರ್ಣೋದ್ಧಾರ ಹಂತದಲ್ಲಿದ್ದು, ಶ್ರೀ ಮಹಾಲಿಂಗೇಶ್ವರನ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರಯವ ನೂತನ ಧ್ವಜ ಸ್ತಂಭದ ತೈಲಾಧಿವಾಸ ಕಾರ್ಯಕ್ರಮವು ಜರುಗಿತು.
ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಧ್ವಜ ಸ್ತಂಭದ ಪ್ರತಿಷ್ಠಾಪನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಮಾಣಿಲ ಶ್ರೀಧಾಮದ ಶ್ರೀದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಸಭಾಧ್ಯಕ್ಷತೆ ವಹಿಸಿದ್ದರು. ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮಂಜುನಾಥ ಭಂಡಾರಿ ಶೆಡ್ಡೆ, ಉದ್ಯಮಿಗಳಾದ ರಘುನಾಥ ಸೋಮಾಯಾಜಿ, ಪ್ರಶಾಂತ್ ಸನಿಲ್, ಬಂಟ್ವಾಳದ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಂಟ್ವಾಳ ಬಿಲ್ಲವರ ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿ.ಪಂ. ಮಾಝಿ ಸದಸ್ಯ ರವೀಂದ್ರ ಕಂಬಳಿ ಮತ್ತಿತತರರು ಉಪಸ್ಥಿತರಿದ್ದರು.