ಗಣೇಶ ಕೊಲೆಕಾಡಿಯವರಿಗೆ ಯಕ್ಷಾವಾಸ್ಯಮ್ ಪ್ರಶಸ್ತಿ ಪ್ರದಾನ
ಬಂಟ್ವಾಳ: ಯಕ್ಷಾವಾಸ್ಯಂ ಕಾರಿಂಜ ಇದರ ತೃತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾ.ಪಂ.ನ ವಗ್ಗ , ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನ. ೫ರಂದು ನಡೆಯಿತು.
ಬೆಳಗ್ಗೆ ಪಚ್ಚಾಜೆಗುತ್ತು ಜಿನರಾಜ ಆರಿಗ ಅವರು ಕಾರ್ಯಕ್ರಮ ಉದ್ಘಾಟಿಸಿದರು.ಯಕ್ಷ ಕೂಟ ಮಧ್ವ ಇದರ ಅಧ್ಯಕ್ಷ ಭಾಸ್ಕರ ಶೆಟ್ಟಿ ಮಧ್ವ, ಹಿರಿಯ ಯಕ್ಷ ಕಲಾವಿದ ದಿವಾಕರ ದಾಸ್ ಕಾವಳಕಟ್ಟೆ , ಜನಾರ್ದನ ಭಟ್ ಕಾರಿಂಜ ಆವರು ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪೂರ್ವರಂಗ, ಮಕ್ಕಳ ಯಕ್ಷಗಾನ ಗಣಪತಿ ಕೌತುಕ,ಭಾಗವತಿಕೆ ನಡೆಯಿತು.
ಬಳಿಕ ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ ಗಣೇಶ ಕೊಲೆಕ್ಕಾಡಿ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಯಕ್ಷಾವಾಸ್ಯಮ್ ಪ್ರಶಸ್ತಿ ಪ್ರದಾನ ನಡೆಸಲಾಯಿತು. ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ ಎಂ.ಕೆ. ಅವರು ಅದ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕಲೆಯ ಜತೆ ಸಂಸ್ಕೃತಿ ಮತ್ತು ಧರ್ಮವಿದೆ. ಕಲೆಯ ಮೇಲೆ ಅಭಿರುಚಿ ಹೊಂದಿದಾಗ ಉತ್ತಮ ನಾಗರಿಕ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಕಲೆ ಮತ್ತು ಕಲಾವಿದರನ್ನು ಬೆಳೆಸುವ ಕಾರ್ಯ ಮಾಡುತ್ತಿರುವ ಯಕ್ಷವಾಸ್ಯಮ್ ಕಾರ್ಯ ಪ್ರಶಂಸನೀಯ ಎಂದು ಹೇಳಿದರು.
ಗಣೇಶ ಕೊಲೆಕಾಡಿ ಅವರ ಶಿಷ್ಯ ದೀವಿತ್ ಕೆ.ಎಸ್.ಪೆರಾಡಿ ಅಭಿನಂದನ ನುಡಿಗಳನ್ನಾಡಿ, ಗಣೇಶ ಕೊಲೆಕಾಡಿ ಅವರು ತಮ್ಮ ಅನಾರೋಗ್ಯದಲ್ಲಿಯೂ ಯಕ್ಷಗಾನದ ಬಗ್ಗೆ ವಿಶೇಷ ಕಾಳಜಿ ವಹಿಸಿ ಯಕ್ಷಗಾನಕ್ಕೆ ಆಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ನಿವಾಸಕ್ಕೆ ತರಳಿ ಪ್ರಶಸ್ತಿ ನೀಡಲಾಗುವುದು ಎಂದರು. ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು.
ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಉದ್ಯಮಿ ನಾಗೇಶ್ ಶೆಟ್ಟಿ ಬಂಟ್ವಾಳ, ಶ್ರೀ ಶಾರದಾಂಬಾ ಭಜನ ಮಂದಿರದ ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ಮಧ್ವ ಶಿವಾಜಿ ಬಳಗದ ಅಧ್ಯಕ್ಷ ನಿತಿನ್, ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಯಕ್ಷವಾಸ್ಯಮ್ ಸಂಸ್ಥೆಯ ಮಿಥುನ್ ರಾಜ್ ಭಟ್, ಭಜನ ಮಂದಿರ ಅಧ್ಯಕ್ಷ ಬಾಲಕೃಷ್ಣ ಕಾಡಬೆಟ್ಟು, ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಅಭಿವೃದ್ಧಿ ಪ್ರಾಽಕಾರ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿ ಸ್ವಾಗತಿಸಿದರು. ಸಂಚಾಲಕಿ ಸಾಯಿಸುಮಾ ಎಂ.ನಾವಡ ಕಾರಿಂಜ ವಂದಿಸಿದರು. ಸುಜಯಾ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಕ್ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಬಳಿಕ ಯಕ್ಷಗಾನ ಅತಿಕಾಯ -ಇಂದ್ರಜಿತು ಪ್ರದರ್ಶನ ನಡೆಯಿತು.