ಬಂಟ್ವಾಳ: ಮೂಲತಃ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು.
Advertisement
ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದ್ದಲ್ಲಿದ್ದು ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಉತ್ತಮ ಕ್ರೀಡಾಪಟು ಆಗಿರುವ ಅವರಿಗೆ ಕ್ರಿಕೆಟ್ ಎಂದರೆ ಅಚ್ಚುಮೆಚ್ಚು. ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ್ದಿದ್ದು ಊರಿನ ಜನರಲ್ಲಿ ಸಂಭ್ರಮ ಮನೆ ಮಾಡಿದೆ.
Advertisement