ಬಂಟ್ವಾಳ: ತಾಲೂಲು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕುಲಾಲ ಸಂಘಗಳ ಸಮಾಗಮ ಕುಲಾಲ ಸಂಘ ಸಮ್ಮಿಲನ ಕಾರ್ಯಕ್ರಮ ನ.26ರಂದು ಭಾನುವಾರ ಬೆಳಿಗ್ಗೆ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 9ಕ್ಕೆ ಬಿಎಸ್ಎನ್ಎಲ್ನ ನಿವೃತ್ತ ಎಜಿಎಂ ಕೃಷ್ಣಶ್ಯಾಮ್ ದೀಪ ಪ್ರಜ್ವಲನೆ ಮಾಡುವರು, ಮಧ್ಯಾಹ್ನ 12.15ರಿಂದ ಸಭಾಕಾರ್ಯಕ್ರಮ ನಡೆಯಲಿದ್ದು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಕೆಪಿಸಿ ಲಿ.ನ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಪ್ಪ ಅಲೆತ್ತೂರು, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲ ಮಾತೃ ಸಂಘದದ ಮಾಜಿ ಅಧ್ಯಕ್ಷ ರಾಜೇಂದ್ರ ಕುಮಾರ್ ಅಳಪೆ, ನಿವೃತ್ತ ಉಪ ತಹಶೀಲ್ದಾರ್ ಪದ್ಮನಾಭ ಎಂ. ಮಯ್ಯರಬೈಲು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಕುಲಾಲ ಸಂಘಗಳ ಜೊತೆ ಮಾತುಕತೆ, ಸಂವಾದ ವಿಚಾರ ವಿನಿಮಯ ಹಾಗೂ ಮನೋರಂಜನಾ ಆಟಗಳು ನಡೆಯಲಿದೆ.ಲೀ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟಕ್ಕೆ ಅಭಿನಂದನೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.