
ಬಂಟ್ವಾಳ: ತುಳುನಾಡಿನ ಕಾರಣಿಕ ಪ್ರಸಿದ್ದ ದೈವಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ವರ್ಷಾವಧಿ ಕೋಲ ನಡೆಯಿತು. ಬೆಳಿಗ್ಗೆ ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ಪೌರೋಹಿತ್ಯದಲ್ಲಿ ಪುಣ್ಯಾಹ, ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ, ನಾಗತಂಬಿಲ, ಫಲಪಂಚಾಮೃತ ಅಭಿಷೇಕ, ಆಶ್ಲೇಷ ಬಲಿ ಪೂಜೆ, ಪಲ್ಲಪೂಜೆ ನಡೆಯಿತು.




ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮನಾಥ ರೈ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದ ಪ್ರಮುಖರು ಭೇಟಿ ನೀಡಿ ಶ್ರೀ ದೈವದ ಗಂಧಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಮೂಲ್ಯ, ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್ ಮೊದಲಾವರು ಉಪಸ್ಥಿತರಿದ್ದರು. ರಾತ್ರಿ ಶ್ರೀ ದೈವಗಳ ಕೋಲ ನಡೆದಿದ್ದು ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕೋಲ ವೀಕ್ಷಿಸಿದರು.

