ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕುಲಾಲ ಸಂಘಗಳ ಸಮಾಗಮ ಕುಲಾಲ ಸಂಘ ಸಮ್ಮಿಲನ ಕಾರ್ಯಕ್ರಮ ಭಾನುವಾರ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು.
ಬೆಳಿಗ್ಗೆ ಬಿಎಸ್ಎನ್ಎಲ್ ನಿವೃತ್ತ ಎಜಿಎಂ ಕೃಷ್ಣಶ್ಯಾಂ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮಧ್ಯಾಹ್ನ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಒಕ್ಕೂಟದ ಪರವಾಗಿ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ ಹಾಗೂ ಬಿ.ಫಾರ್ಮದಲ್ಲಿ ಚಿನ್ನದ ಪದಕ ವಿಜೇತೆಯಾದ ಶಿವಾನಿ ಅವರನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯ ಅತಿಥಿಯಾಗಿ ಕೆಪಿಸಿ ಲಿ. ನ ನಿವೃತ್ತ ಸಹಾಯಕ ಕಾರ್ಯನಿವಾಹಕ ಅಭಿಯಂತರ ಶಿವಪ್ಪ ಅಲೆತ್ತೂರು, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಮಾಜಿ ಅಧ್ಯಕ್ಷ ರಾಜೇಂದ್ರ ಕುಮಾರ್ ಅಳಪೆ, ನಿವೃತ್ತ ಉಪತಹಶೀಲ್ದಾರ್ ಪದ್ಮನಾಭ ಮಯ್ಯರಬೈಲು,
ಬಿಎಸ್ಎನ್ಎಲ್ ನಿವೃತ್ತ ಎಜಿಎಂ ಕೃಷ್ಣಶ್ಯಾಂ, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ, ಸೇವಾದಳಪತಿ ರಾಜೇಶ್ ರಾಯಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಧಾನ ಸಂಯೋಜಕ ಮಚ್ಚೇಂದ್ರ ಸಾಲ್ಯಾನ್ ಸ್ವಾಗತಿಸಿದರು. ಉದ್ಘಾಟನಾ ಸಮಾರಂಭವನ್ನು ಪತ್ರಕರ್ತ ಸಂದೀಪ್ ಸಾಲ್ಯಾನ್ ನಿರ್ವಹಿಸಿ, ಸಮಾರೋಪ ಸಮಾರಂಭವನ್ನು ಸಂಘದ ಕಾರ್ಯದರ್ಶಿ ಕೇಶವ ಮಾಸ್ಟರ್ ನಿರೂಪಿಸಿದರು. ಕಾಐಕಾರಿ ಸಮಿತಿ ಸದಸ್ಯ ದಾಮೋದರ ಏರ್ಯ ವಂದಿಸಿದರು. ತಾಲೂಕಿನ ವಿವಿಧ ಕುಲಾಲ ಸಂಘಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಮನೋರಂಜನಾ ಆಟಗಳು, ವಿಚಾರವಿನಿಮಯ ಚಟುವಟಿಕೆಯಲ್ಲಿ ಭಾಗವಹಿಸಿದರು.